ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚು ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ತಕ್ಷಣ 6 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯನ್ನು ನಡೆಸಲು ಅವಕಾಶ ಕಲ್ಪಿಸುವಂತೆ ರೂಪ್ಸಾ ( ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ) ರಾಜ್ಯ ಸರಕಾರ ಮನವಿ ಮಾಡಿಕೊಂಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಪೂರಕವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿಯೂ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ಅಲ್ದಲೇ ಮುಂದಿನ ಶೈಕ್ಷಣಿಕ ವರ್ಷಾರಂಭದ ಸಿದ್ದತೆ ಮಾಡಿಕೊಳ್ಳಲು ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಕೂಡಲೇ ಮುಂದಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪ್ರಕಟಿಸುವುದರ ಜೊತೆಗೆ ಮುಂದಿನ ವರ್ಷದಿಂದ ಆಪ್ ಲೈನ್ ಅಥವಾ ಆನ್ ಲೈನ್ ಮೂಲಕ ಶಾಲೆಗಳನ್ನು ನಡೆಸಬೇಕೆ ಅನ್ನುವ ಕುರಿತು ಸ್ಪಷ್ಟನೆಯನ್ನು ನೀಡಬೇಕು. ಹೀಗಾಗಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಗಳನ್ನು ತಕ್ಷಣಕ್ಕೆ ಮುಗಿಸಲು ಅವಕಾಶ ಕಲ್ಪಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರಬರೆದಿದ್ದಾರೆ.
ರಾಜ್ಯದಲ್ಲಿನ ಖಾಸಗಿ ಶಾಲೆಗಳಲ್ಲಿ ಕಳೆದ ಜೂನ್ ತಿಂಗಳಿನಿಂದಲೇ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲಾಗುತ್ತಿದೆ. ಈಗಾಗಲೇ ಪಠ್ಯ ಚಟುವಟಿಕೆಗಳನ್ನು ಮುಗಿಸಿ, ಪುನರಾವರ್ತೆಯನ್ನೂ ಮುಕ್ತಾಯಗೊಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ವರ್ಷವಿಡೀ ಅಭ್ಯಾಸ ಮಾಡಿರುವುದು ವ್ಯರ್ಥವಾಗಬಾರದು. ಕೊರೊನಾ ಸೋಂಕು ಹೆಚ್ಚಳವಾಗಿ ಶೈಕ್ಷಣಿಕ ವರ್ಷವೇ ವ್ಯರ್ಥವಾಗುವ ಭೀತಿ ಕಾಡುತ್ತಿದೆ. ಪೋಷಕರು ಕೂಡ ಕೂಡಲೇ ಪರೀಕ್ಷೆ ನಡೆಸುವಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ತಕ್ಷಣವೇ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ.