ಸೋಮವಾರ, ಏಪ್ರಿಲ್ 28, 2025
Homeeducationಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ

- Advertisement -

ಬೆಂಗಳೂರು : ವಿಧಾನ ಪರಿಷತ್‌ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳ ಶಾಲೆ ಹಾಗೂ ಕಾಲೇಜುಗಳಿಗೆ (School and college holiday ) ಇಂದು ರಜೆಯನ್ನು ಘೋಷಣೆ ಮಾಡಿದೆ. ಒಟ್ಟು ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು ಹನ್ನೊಂದು ಜಿಲ್ಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ಬಂದ್‌ ಆಗಲಿದೆ.

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಪರಿಷತ್ ಚುನಾವಣೆಗಾಗಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದ್ದು, ಶೈಕ್ಷಣಿಕ ಸಂಸ್ಥೆಗಳ ಜೊತೆಗೆ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರಿ ಕಾರ್ಕಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದಲ್ಲಿನ ಸಂಸ್ಥೆಗಳು, ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಅಷ್ಟ ಅಲ್ಲದೇ ಖಾಯಂ ಹಾಗೂ ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರ ಹಾಗೂ ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಉಳಿದೊಂದು ಸ್ಥಾನಕ್ಕೆ ಜೆಡಿಎಸ್‌ ಪ್ರಬಲ ಪೈಪೋಟಿ ನೀಡುತ್ತಿದೆ.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಾದ್ಯಂತ ಏಳು ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕದಲ್ಲಿ ಶೀಘ್ರದಲ್ಲೇ ಏಳು ಡಿಜಿಟಲ್ ವಿಶ್ವವಿದ್ಯಾಲಯಗಳು ಆರಂಭವಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ವಾಯವ್ಯ ಶಿಕ್ಷಕರ ಮತ್ತು ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ‘ಕರ್ನಾಟಕದಲ್ಲಿ ನುರಿತ ಮಾನವ ಸಂಪನ್ಮೂಲದ ದೊಡ್ಡ ಸಮೂಹವೇ ಇದೆ.

ಇದನ್ನು ಬಳಸಿಕೊಂಡು ಸರ್ಕಾರ ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಿದೆ. ಅಸ್ತಿತ್ವದಲ್ಲಿರುವ ಭೌತಿಕ ವಿಶ್ವವಿದ್ಯಾನಿಲಯಗಳು ಆಡಳಿತದ ಹೊರೆಯಲ್ಲಿ ತತ್ತರಿಸುತ್ತಿವೆ, ಅಲ್ಲಿ ಶಿಕ್ಷಣದ ಕೊರತೆಯಿದೆ. ಆದ್ದರಿಂದ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಬೇಕು’ ಎಂದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಶೀಘ್ರದಲ್ಲೇ ವೈದ್ಯಕೀಯ ಸಂಶೋಧನೆಯಲ್ಲಿ ಶ್ರೇಷ್ಠತೆಯ ಕೇಂದ್ರವನ್ನು ಹೊಂದಲಿದೆ. ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ 7 ಸಾವಿರ ತರಗತಿ ಕೊಠಡಿಗಳನ್ನು ನಿರ್ಮಿಸಿದೆ. ಜತೆಗೆ 6 ಸಾವಿರ ಸ್ಮಾರ್ಟ್ ಕ್ಲಾಸ್‌ಗಳನ್ನು ನಿರ್ಮಿಸಲು ಆದೇಶ ನೀಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ : SBI CBO Result 2022 ಪ್ರಕಟ: ಸಂದರ್ಶನ ಪತ್ರವನ್ನು ಡೌನ್‌ಲೋಡ್ ಮಾಡಿ

ಇದನ್ನೂ ಓದಿ : KCET 2022 ಆನ್‌ಲೈನ್‌ ನೋಂದಣಿ ಆರಂಭ : kea.kar.nic.in ನಲ್ಲಿ ಅರ್ಜಿ ಸಲ್ಲಿಸಿ

School and college holiday today in Karnataka these districts

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular