ರಾಜ್ಯದಲ್ಲಿ ಸದ್ಯಕ್ಕಿಲ್ಲ ಶಾಲೆ, ಕಾಲೇಜು ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮವನ್ನುಂಟು ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಾಲೆ, ಕಾಲೇಜು ಆರಂಭಿಸೋದು ಸದ್ಯಕ್ಕೆ ಅಸಾಧ್ಯ. ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಅನ್ನೋ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ. ಅದ್ರಲ್ಲೂ ವಿದ್ಯಾರ್ಥಿ ಗಳಿಗೆ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಲಾಗುತ್ತದೆ. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದಿದ್ದಾರೆ.

https://kannada.newsnext.live/highcourt-corona-lockdown-police-beating-people-pil-dismiss/

ಶಾಲೆಗಳು ಆರಂಭವಾಗದಿದ್ದರೂ ಕೂಡ ಸಕಾಲದಲ್ಲಿಯೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಒದಗಿಸುವಂತೆ ಸೂಚನೆಯನ್ನು ನೀಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Comments are closed.