School college start : ಹರ್ಷ ಹತ್ಯೆ ಪ್ರಕರಣ, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ : ನಾಳೆಯಿಂದ ಶಾಲೆ, ಕಾಲೇಜು ಆರಂಭ

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಶಿವಮೊಗ್ಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇದೀಗ ಫೆಬ್ರವರಿ 28 (ಸೋಮವಾರ) ರಿಂದ ಶಾಲೆ, ಕಾಲೇಜುಗಳನ್ನು(School college start ) ಆರಂಭಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಕಳೆದ ಭಾನುವಾರ ರಾತ್ರಿ ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ ಪಾರ್ಥಿವ ಶರೀರದ ಮೆರವಣಿಗೆಯ ವೇಳೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಶಿವಮೊಗ್ಗದಲ್ಲಿ ಪರಿಸ್ಥಿತಿ ಕೈ ಮೀರಿತ್ತು. ಹೀಗಾಗಿ ಶಾಲೆ, ಕಾಲೇಜುಗಳಿಗೆ ರಜೆಯನ್ನು ಮುಂದುವರಿಸಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು.

ಕಳೆದ ಶುಕ್ರವಾರದಂದು ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಮುಂದಾಗಿದ್ದರೂ ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳನ್ನು (School college start ) ಆರಂಭಿಸಿಲ್ಲ. ಆದ್ರೀಗ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಸೋಮವಾರದಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ. ಭಾನುವಾರ ಬೆಳಗ್ಗೆ 6 ಗಂಟೆಗೆ ನಿಷೇಧಾಜ್ಞೆಗೆ ರಿಲೀಫ್‌ ನೀಡಲಾಗಿದ್ದು, ಸಂಜೆ 4 ಗಂಟೆಯಿಂದ ಮತ್ತೆ ನಿಷೇಧಾಜ್ಞೆಯನ್ನು ಮುಂದುವರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಗರೀಕರು ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದರು. ಕೆಲವು ಬಸ್‌ಗಳು ಕೂಡ ಸಂಚಾರವನ್ನು ನಡೆಸಿದ್ದು, ಆಟೋ, ಟ್ಯಾಕ್ಸಿ ಸೇವೆ ಆರಂಭಗೊಂಡಿದೆ. ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದ್ದರೂ ಕೂಡ ನಗರದಲ್ಲಿ ಪೊಲೀಸ್‌ ಭದ್ರತೆಯನ್ನು ಇನ್ನಷ್ಟು ದಿನಗಳ ಕಾಲ ಮುಂದುವರಿಕೆ ಮಾಡುವ ಸಾಧ್ಯತೆಯಿದೆ. ಜನಜೀವನ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿ, ಶಾಲೆ, ಕಾಲೇಜುಗಳು ಎಂದಿನಂತೆಯೇ ಕಾರ್ಯಾರಂಭಿಸಲು ಶುರು ಮಾಡಿದ ನಂತರದಲ್ಲಿ ಸೆಕ್ಷನ್‌ ತೆರವು ಮಾಡುವ ಸಾಧ್ಯತೆಯಿದೆ.

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ

ರಾಜ್ಯವನ್ನೇ ಬೆಚ್ಚಿ‌ಬೀಳಿಸಿದ್ದ ಹಿಂದೂ ಪರ ಸಂಘಟನೆ‌ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ರವಿವಾರ ರಾತ್ರಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಆರೋಪಿಗಳನ್ನು ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈಗ ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ಮನವಿ ಮೇರೆಗೆ ಶಿವಮೊಗ್ಗದ ಎರಡನೇ ಜೆಎಮ್ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮತಿ 11 ದಿನಗಳ ಕಾಲ ಆರೋಪಿಗಳನ್ನು ತನಿಖಾ ತಂಡದ ವಶಕ್ಕೆ ನೀಡಲಾಗಿದೆ.

ರವಿವಾರ ನಡೆದ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವೇ ವಿಶೇಷ ಪೊಲೀಸ್ ತನಿಖಾ ತಂಡ ಇಬ್ಬರೂ ಆರೋಪಿಗಳನ್ನು ಬಂಧಿಸಿತ್ತು.‌ಬಂಧಿತ ಖಾಸೀಫ್ ಹಾಗೂ‌ ನದೀಮ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಬಳಿಕ ಒಟ್ಟು 10 ಜನರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಫೆ.23 ರಂದು ಪ್ರಕರಣಕ್ಕೆ ಸಂಬಂಧಿಸಿ ದಂತೆ ಅಬ್ದುಲ್ ರೋಶನ್ ಹಾಗೂ ಜಾಫರ್ ಸಾದಿಕ್ ಎಂಬಾತನನ್ನು ತನಿಖಾ ತಂಡ ಬಂಧಿಸಿತ್ತು. ಮಾತ್ರವಲ್ಲದೇ ಕೊಲೆಗೆ ಬಳಸಲಾದ ಆರು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಮಧ್ಯೆ ವಿಶೇಷ ತನಿಖಾ ತಂಡ ಕೊಲೆಗೆ ಕಾರಣವಾದ ಅಂಶಗಳೇನು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದೆ. ಈ ಮಧ್ಯೆ ಕೊಲೆಯಾಗುವ ಕೆಲವೇ ಗಂಟೆಗಳ ಮೊದಲು ಹರ್ಷನಿಗೆ ವೀಡಿಯೋ ಕೊಲೆ‌ಮಾಡಿದ್ದರೂ ಎನ್ನಲಾದ ಯುವತಿಯರ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ. ಹರ್ಷನ ಸ್ನೇಹಿತರು ನೀಡಿದ ಮಾಹಿತಿ ಆಧರಿಸಿ ತನಿಖೆ ಚುರುಕು ಗೊಳಿಸಿರುವ ಪೊಲೀಸರಿಗೆ ಕಾಲ್ ಮಾಡಿದ ಹುಡುಗಿಯರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆಯಂತೆ.

ಹೀಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದ್ದು ಆರೋಪಿಗಳಿಂದ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಈ ಕೃತ್ಯದ ಹಿಂದಿನ ಪ್ರೇರಣೆ ಯಾರು ? ನಿಜವಾಗಿಯೂ ಹತ್ಯೆ ಹಳೆಯ ದ್ವೇಷದಿಂದಲೇ ನಡೆದಿದ್ದಾರೆ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕಲಿದ್ದಾರೆ. ಪೊಲೀಸರ ತನಿಖೆಗೆ ಪತ್ತೆಯಾದ ಹರ್ಷ ಮೊಬೈಲ್ ಪೋನ್ ಇನ್ನಷ್ಟು ಬಲತುಂಬಿದ್ದು, ಈಗಾಗಲೇ ಪತ್ತೆಯಾಗಿರೋ ಹರ್ಷನ ಮೊಬೈಲ್ ನ್ನು ಪೊಲೀಸರು ರಿಟ್ರೀವ್ ಗಾಗಿ ಲ್ಯಾಬ್ ಗೆ ಕಳುಹಿಸಿ ಕೊಟ್ಟಿದ್ದಾರೆ.

ಇದನ್ನೂ ಓದಿ : ಮಾರ್ಚ್‌ 4 ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ, ಕಾಲೇಜುಗಳು ಬಂದ್‌

ಇದನ್ನೂ ಓದಿ : ಹರ್ಷ ತಾಯಿಗೆ ಬಿಜೆಪಿ ಕೊಟ್ಟರೇ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಲ್ಲ: ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ

(School and college start tomorrow after Harsha murder case in Shivamogga)

Comments are closed.