ಜ್ವರ, ಕೆಮ್ಮ, ನೆಗಡಿ ಇದ್ರೆ ಮಕ್ಕಳಿಗೆ ರಜೆ : ಶಾಲಾ ಶಿಕ್ಷಣ ಇಲಾಖೆ ಹೊಸ ಕೋವಿಡ್ ಮಾರ್ಗಸೂಚಿ ‌ಪ್ರಕಟ

Karntaka new Covid guidelines 2025 : Karntaka new Covid guidelines 2025ಬೆಂಗಳೂರು : ಕರ್ನಾಟಕ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ನಡುವಲ್ಲೇ ಮಳೆಗಾಲ ಜೊತೆಗೆ ಶಾಲೆಗಳು ಪುನರಾರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹೊಸ ಕೋವಿಡ್‌ ಮಾರ್ಗಸೂಚಿ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ಕರ್ನಾಟಕ ರಾಜ್ಯದ ಎಲ್ಲಾ ಸರಕಾರ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವು ಆರಂಭಗೊಂಡಿದೆ. ಇದರ ಜೊತೆಯಲ್ಲಿಯೇ ಕೋವಿಡ್‌ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಸೂಚಿಸಿದೆ.

ಇದನ್ನೂ ಓದಿ : ಕರ್ನಾಟಕ ಬ್ಯಾಂಕ್ ನೇಮಕಾತಿ 2025: ಪದವಿಧರರಿಗೆ ಉದ್ಯೋಗ, ರೂ. 82920 ವೇತನ

ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಎಲ್ಲಾ ಶಾಲೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ತಿಳಿಸಲಾಗಿದೆ. ಹಾಗಾದ್ರೆ ಕರ್ನಾಟಕ ಸರಕಾರ ಶಾಲಾ ವಿದ್ಯಾರ್ಥಿಗಳಿಗಾಗಿ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಏನಿದೆ ಅನ್ನೋದನ್ನು ನೋಡೋದಾದ್ರೆ.

Karntaka new Covid guidelines 2025 : ಶಾಲಾ ಶಿಕ್ಷಣ ಇಲಾಖೆಯ ಕೋವಿಡ್‌ ಮಾರ್ಗಸೂಚಿಯಲ್ಲೇನಿದೆ ?

ಇದನ್ನೂ ಓದಿ : Viral news : ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ರೆ 13,000ರೂ. ದಂಡ..! ಜುಲೈ 1ರಿಂದ ಹೊಸ ರೂಲ್ಸ್‌

ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪ್ರತಿಯೊಬ್ಬರೂ ಕೂಡ ಪಾಲನೆ ಮಾಡಬೇಕಾಗಿದೆ. ಅಲ್ಲದೇ ಇಲಾಖೆಗಳಿಗೆ ಕೋವಿಡ್‌ ಸೋಂಕಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಮಾರ್ಗಸೂಚಿಯನ್ನು ಹೊರಡಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Children will be given leave if they have a cold, cough or fever: School Education Department issues Karntaka new Covid guidelines 2025 Kannada News

Exit mobile version