ಶಾಲೆಗಳಿಗೆ ಅಗಸ್ಟ್ 31ರ ವರೆಗೆ ರಜೆ : ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಹಿಂದೆ ಜುಲೈ 31ರ ವರೆಗೆ ಮುಚ್ಚಿರುವಂತೆ ಆದೇಶಿಸಲಾಗಿತ್ತು. ಕೇಂದ್ರ ಸರಕಾರದ ಆದೇಶದಂತೆ ಶಿಕ್ಷಕರಿಗೆ ವರ್ಕ್ ಪ್ರಂ ಹೋಮ್ ಕೈಗೊಳ್ಳುವಂತೆ ಸರಕಾರ ಸೂಚನೆಯನ್ನು ನೀಡಿತ್ತು. ಇದೀಗ ಅನ್ ಲಾಕ್ 3.0 ಮಾರ್ಗಸೂಚಿಯ ಅನ್ವಯ ಕೇಂದ್ರ ಸರಕಾರ ಶಾಲೆ, ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಅಗಸ್ಟ್ 31ರ ವರೆಗೆ ಮುಚ್ಚಿರುವಂತೆ ಆದೇಶ ಹೊರಡಿಸಲಾಗಿದೆ.

ಹೀಗಾಗಿ ಈ ಹಿಂದೆ ಆದೇಶಿಸಿರುವ ಆದೇಶವನ್ವಯ ಮುಂದುವರಿಸಿ ಇದೀಗ ಹೊಸ ಆದೇಶದ ಪ್ರಕಾರ ವರ್ಕ್ ಫ್ರಂ ಹೋಂ ಆದೇಶ ಮುಂದುವರಿಯಲಿದ್ದು, ಶಿಕ್ಷಕರು ಮನೆಯಿಂದಲೇ ಶೈಕ್ಷಣಿಕ ಚಟುವಟಿಕೆಯನ್ನು ನಡೆಸಬೇಕಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಅಗಸ್ಟ್ 31ರ ವರೆಗೆ ಕಡ್ಡಾಯವಾಗಿ ಮುಚ್ಚಿರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶವನ್ನು ಹೊರಡಿಸಿದ್ದಾರೆ.

ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚುವಂತೆ ಕೇಂದ್ರ ಸರಕಾರ ಆದೇಶವನ್ನು ಹೊರಡಿಸಿತ್ತು. ತದನಂತರದಲ್ಲಿ ಹೇರಿಕೆಯಾದ ಲಾಕ್ ಡೌನ್ ನಿಂದಾಗಿ ಶಾಲೆಗಳು ಆರಂಭಗೊಂಡಿರಲಿಲ್ಲ. ಆದರೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗುತ್ತಿದ್ದಂತೆಯೇ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಕುರಿತು ಯಾವುದೇ ಯೋಚನೆಯನ್ನು ಮಾಡಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರು ಕೂಡ ಶಿಕ್ಷಕರು ಮಾತ್ರ ಶಾಲೆಗಳಿಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಸೂಚಿಸಿತ್ತು. ತದನಂತರದಲ್ಲಿ ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಸರಕಾರದ ಮಾರ್ಗಸೂಚಿಯಂತೆಯೇ ಶಿಕ್ಷಕರು ಮನೆಯಲ್ಲಿಯೇ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದರು.

ಇದೀಗ ಕೇಂದ್ರ ಸರಕಾರ ಆದೇಶಂತೆಯೇ ಅಗಸ್ಟ್ 31ರ ವರೆಗೆ ಶಾಲೆ, ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಹೀಗಾಗಿ ಶಿಕ್ಷಕರೂ ಕೂಡ ಮನೆಯಿಂದಲೇ ಮಕ್ಕಳಿಗೆ ವಿದ್ಯಾಗಮ ಯೋಜನೆಯನ್ವಯ ಶೈಕ್ಷಣಿಕ ಚಟುವಟಿಕೆಯನ್ನು ಕೈಗೊಳ್ಳಬೇಕಾಗಿದೆ.

Leave A Reply

Your email address will not be published.