school Holiday Declared : ಉಡುಪಿಯಲ್ಲಿ ರಜೆ ನಿರ್ಧಾರ ಶಾಲೆ ಆಡಳಿತ ಮಂಡಳಿಗೆ ಎಂದ ಡಿಸಿ : ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರಜೆ ನೀಡುವ ಅಧಿಕಾರವನ್ನು ಆಯಾಯ ಶಾಲೆಗಳ ಆಡಳಿತ ಮಂಡಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶಿಸಿದ್ದಾರೆ. ಇನ್ನೊಂದೆಡೆಯಲ್ಲಿ ಬ್ರಹ್ಮಾವರ ತಾಲೂಕಿನಾದ್ಯಂತ ಶಾಲೆಗಳಿಗೆ ತಹಶೀಲ್ದಾರ್‌ ರಜೆ ಘೋಷಣೆ (school Holiday Declared) ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಬಿಟ್ಟು ಬಿಡದಂತೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗಾಳಿ ಮಳೆ ಹೆಚ್ಚಾದ್ರೆ ಹಾಗೂ ನೆರೆ ಭೀತಿ ಇದ್ದಲ್ಲಿ ರಜೆ ನೀಡುವಂತೆ ಸೂಚನೆಯನ್ನು ನೀಡಲಾಗಿದೆ. ಅಲ್ಲದೇ ಪರಿಸ್ಥಿತಿಯನ್ನು ಅರಿತು ರಜೆ ನೀಡುವ ನಿರ್ಧಾರವನ್ನು ಶಾಲೆಗಳ ಆಡಳಿತ ಮಂಡಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ವಿಪರೀತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬ್ರಹ್ಮಾವರ ತಹಶೀಲ್ದಾರ್‌ ಮಧ್ಯಾಹ್ನದಿಂದ ಶಾಲೆಗಳಿಗೆ ರಜೆ ಘೋಷಣೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಕಾರ್ಯವನ್ನು ಮುಖ್ಯ ಶಿಕ್ಷಕರು ಗಾಗೂ ಸಹ ಶಿಕ್ಷಕರು ಮಾಡಬೇಕು ಎಂದು ಸೂಚಿಸಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಬ್ರಹ್ಮಾವರ, ಉಡುಪಿ, ಕಾಪು, ಹೆಬ್ರಿ, ಕಾರ್ಕಳ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಹಲವು ಕಡೆಗಳಲ್ಲಿ ಕೃತಕ ನೆರೆ ಹಾವಳಿ ಸೃಷ್ಟಿಯಾಗಿದೆ. ನಾಳೆಯೂ ಕೂಡ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತ ನಿನ್ನೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಇಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಮಳೆ ಸಂಜೆಯ ವರೆಗೂ ಮುಂದುವರಿದಲ್ಲಿ, ನಾಳೆ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ : Karnataka SSLC Result 2022 Live : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ : 145 ವಿದ್ಯಾರ್ಥಿಗಳಿಗೆ 625 ಅಂಕ

ಇದನ್ನೂ ಓದಿ : Heavy rain school Holiday : ಕರಾವಳಿಯಲ್ಲಿ ಮಳೆಯ ಆರ್ಭಟ : ಇಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

school Holiday Declared Brahamavar Taluk Udupi District

Comments are closed.