ಉಡುಪಿ, ಮಂಗಳೂರು ಶಾಲೆಗಳಿಗೆ ರಜೆ : ಜುಲೈ 17ರಂದು ಬಾರೀ ಮಳೆ

Heavy Rain school Holiday : ಉಡುಪಿ/ ಮಂಗಳೂರು : ಕಳೆದ ಎರಡು ದಿನಗಳಿಂದಲೂ ಕರಾವಳಿಯಾದ್ಯಂತ ಬಾರೀ ಮಳೆ ಸುರಿಯುತ್ತಿದೆ. ಜುಲೈ 17ರಂದು ಮಳೆ ಮುಂದುವರಿಕೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ (school Holiday) ಘೋಷಣೆ ಮಾಡಲಾಗಿದೆ.

Also Read : ಯುಪಿಐ (UPI) ಹಣ ವರ್ಗಾವಣೆ : ಅಗಸ್ಟ್‌ 1ರಿಂದ ಹೊಸ ರೂಲ್ಸ್‌

ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಆದರೆ ಜಿಲ್ಲೆಯಲ್ಲಿನ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಡಿಪ್ಲೋಮಾ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಆಗಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 17 ರಂದು ಮಂಗಳೂರು, ಬಂಟ್ವಾಳ, ಮೂಡಬಿದಿರೆ, ಮೂಲ್ಕಿ, ಉಳ್ಳಾಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆಯಾಯಾ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

Heavy Rain school Holiday : ಜುಲೈ 21ರ ವರೆಗೆ ಕರಾವಳಿಯಲ್ಲಿ ಬಾರೀ ಮಳೆ

ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ನದಿಗಳು ಮತ್ತು ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ.

ಭಾರತೀಯ ಹವಾಮಾನ ಇಲಾಖೆಯು (IMD) ಉಡುಪಿ ಜಿಲ್ಲೆಗೆ ರೆಡ್ ಅಥವಾ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ.

Also Read : ಹೊಸ ಪಡಿತರ ಚೀಟಿ, ತಿದ್ದುಪಡಿಗೆ ಅವಕಾಶ : ಅರ್ಜಿ ಸಲ್ಲಿಸಲು ಕ್ಲಿಕ್‌ ಮಾಡಿ

ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಜುಲೈ 21ರ ವರೆಗೆ ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಜುಲೈ 21 ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 19 ರಿಂದ 22 ರವರೆಗೆ ಈ ಪ್ರದೇಶದಲ್ಲಿ ‘ಅತಿ ಹೆಚ್ಚು ಭಾರೀ ಮಳೆ’ (Very Heavy Rain) ಆಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ವ್ಯಾಪಕದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಕೂಡ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ಪ್ರತ್ಯೇಕ ಭಾರೀ ಮಳೆಯಿಂದ ಅತಿ ಹೆಚ್ಚು ಭಾರೀ ಮಳೆ” ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

school Holiday Delcared Udupi Dakshina Kannada Managalore Heavy Rain fall in july 17 Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories