ನಾಳೆ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ : ನಕಲಿ ಆದೇಶ ವೈರಲ್‌

School Holiday Fake Government Order : ಬೆಂಗಳೂರು : ಸಾಲುಮರದ ತಿಮ್ಮಕ್ಕ ನಿಧನ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂಬ ಆದೇಶ ಎಲ್ಲೆಡೆ ಹರಿದಾಡುತ್ತಿದ್ದು, ಇದು ನಕಲಿ ಆದೇಶ ಎಂದು ಅರಣ್ಯ ಮತ್ತು ಜೀವಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ನ.15ರಂದು ಬೆಳಗ್ಗೆ 7.30ರಿಂದ 10.30 ಸಾರ್ವಜನಿಕ ದರ್ಶನ ಇಡಲಾಗುತ್ತದೆ.

ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ರಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

School Holiday Fake Government Order : ನಕಲಿ ರಜೆ ಆದೇಶ : ಸಚಿವರ ಸ್ಪಷನೆ

ಸಾಮಾಜಿಕ ಜಾಲತಾಣಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಎನ್ನುವ ಆದೇಶದ ಪ್ರತಿ ಹರಿದಾಡುತ್ತಿದೆ. ಆದರೆ ಈ ಆದೇಶ ನಕಲಿ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ನಾಳೆ ಸರಕಾರಿ ರಜೆ ಇರುವುದಿಲ್ಲ. ಕೇವಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಎಸ್ಎಂ ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ವೈರಲ್‌ ಮಾಡಲಾಗಿದೆ.

ಆದೇಶದ ಪ್ರತಿಯಲ್ಲಿ ಸಹಿ ಮಾಡಿದ ಅಧಿಕಾರಿ ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಇಂತಹ ನಕಲಿ ಆದೇಶವನ್ನು ಯಾರೂ ಕೂಡ ವೈರಲ್‌ ಮಾಡದಂತೆ ಸೂಚಿಸಿದ್ದಾರೆ.

School Holiday Fake Order Circulate Salumarada Thimmakka Death Clarification

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories