School Open Postpone : ಶಾಲೆ ಆರಂಭ ಮುಂದೂಡಿ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಭಾಪತಿ ಬಸವರಾಜ್‌ ಹೊರಟ್ಟಿ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬೇಗೆಯಿಂದ ಜನರು ತತ್ತರಿಸಿದ್ದಾರೆ. ಕಡು ಬೇಸಿಗೆಯಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಜೂನ್‌ 1 ರಿಂದಲೇ ಶಾಲೆಗಳನ್ನು ಆರಂಭಿಸುವಂತೆ (School Open Postpone) ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮೇ 16 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಎಳೆಯ ಮಕ್ಕಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಒಂದೊಮ್ಮೆ ಶಾಲೆಯನ್ನು ಆರಂಭಿಸಿದರೂ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದ್ದರಿಲ್ಲ. ಒಂದೊಮ್ಮೆ ಶಾಲೆಗಳು ಆರಂಭವಾದ್ರೆ ಉತ್ತರ ಭಾರತದಂತೆ ರಾಜ್ಯದಲ್ಲಿಯೂ ಮಕ್ಕಳು ಕೂಡ ಸನ್‌ ಸ್ಟ್ರೋಕ್‌ಗೆ ಒಳಗಾಗುವ ಸ್ಥಿತಿ ಉಂಟಾಗುತ್ತದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಜೂನ್‌ 1 ರಿಂದ ಆರಂಭಿಸುವಂತೆ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬಿರು ಬೇಸಿಗೆ ಕಂಡು ಬಂದಿದೆ. ಬೇಸಿಗೆಯಿಂದಾಗಿ ಜನರು ಹಾಗೂ ಜಾನುವಾರುಗಳು ತೊಂದರೆ ಅನುಭವಿಸುತ್ತಿರುವುದು ನಿಮಗೂ ಗೊತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉರಿ ಬಿಸಿಲು ಮಧ್ಯಾಹ್ನದ ಹೊತ್ತಿನಲ್ಲಿ ನೆತ್ತಿಯನ್ನು ಸುತ್ತಿವೆ. ಒಂದೊಮ್ಮೆ ಬೇಸಿಗೆ ರಜೆಯನ್ನು ವಿಸ್ತರಣೆ ಮಾಡಿದ್ರೆ, ಶೈಕ್ಷಣಿಕ ವರ್ಷದಲ್ಲಿ ಕಡಿಮೆ ಬೀಳುವ ದಿನಗಳನ್ನು ಶನಿವಾರ ಹೆಚ್ಚುವರಿ ತರಗತಿಗಳ ಮೂಲಕ ಸರಿಪಡಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಬೇಸಿಗೆ ರಜೆ ಕಡಿತ ಮಾಡಿರುವ ಕುರಿತು ಶಾಸಕರು, ವಿಧಾನ ಪರಿಷತ್‌ ಸದಸ್ಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಕಾಲದಲ್ಲಿ ಶಾಲಾರಂಭ ಬೇಡ ಅನ್ನೋ ಸಲಹೆಯನ್ನೇ ನೀಡಿದ್ದಾರೆ. ಆದರೆ ಶಿಕ್ಷಣ ಸಚಿವರು ಮಾತ್ರ ಯಾವುದೇ ಕಾರಣಕ್ಕೂ ಶಾಲೆಯ ರಜೆಯನ್ನು ವಿಸ್ತರಣೆ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಬೇಸಿಗೆಯ ಬಿಸಿಲಿನ ಝಳ ಹೆಚ್ಚುತ್ತಿದೆ. ಜೊತೆಗೆ ಅಕಾಲದಲ್ಲಿ ಸುರಿದ ಮಳೆಯಿಂದಾಗಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯೂ ಇದೆ. ಜೊತೆಗೆ ಕೇಂದ್ರ ಸರಕಾರವೇ ಮಕ್ಕಳನ್ನು ಬಿಸಿಲಿನಲ್ಲಿ ಹೊರಗೆ ತಿರುಗಾಡದಂತೆ ಸೂಚನೆಯನ್ನೂ ಕೊಟ್ಟಿದೆ. ಇಷ್ಟೆಲ್ಲಾ ಇದ್ರೂ ಕೂಡ ಸಚಿವರು ಹಠಕ್ಕೆ ಬಿದ್ದಂತೆಯೇ ವರ್ತಿಸುವುದನ್ನು ಬಿಟ್ಟು, ಮಕ್ಕಳ ಆರೋಗ್ಯದ ಹಿತಾಸಕ್ತಿಯಿಂದ ಬೇಸಿಗೆ ರಜೆಯನ್ನು ಮುಂದೂಡಿಕೆ ಮಾಡಿ ಅಂತಾ ಪೋಷಕರು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಕೊರೊನಾ ಸೋಂಕು, ಬೇಸಿಗೆಯ ಬಿಸಿಲು ಮಕ್ಕಳು ಹಾಗೂ ಪೋಷಕರನ್ನು ಆತಂಕಕ್ಕೆ ನೂಕಿದೆ.

ಇದನ್ನೂ ಓದಿ : Summer Holiday : ರಾಜ್ಯದಲ್ಲಿ ಏರುತ್ತಲೇ ಇದೆ ತಾಪಮಾನ : ಶಾಲಾರಂಭ ಮುಂದೂಡಿಕೆ ಸಾಧ್ಯತೆ

ಇದನ್ನೂ ಓದಿ : No Home Work : ಪೋಷಕರು, ಮಕ್ಕಳಿಗೆ ಸಿಹಿಸುದ್ದಿ: ಇನ್ಮುಂದೇ ನೋ ಹೋಂ ವರ್ಕ್

School Open Postpone Basavaraj Horatti Letter to CM Bommai

Comments are closed.