ಮುಂದಿನ ವಾರದಿಂದಲೇ ಶಾಲೆ, ಕಾಲೇಜು ಆರಂಭ : ಕೇಂದ್ರ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

0

ನವದೆಹಲಿ : ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಹಲವು ಸೇವೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿದೆ. ಪ್ರಮುಖವಾಗಿ ಕೇಂದ್ರ ಸರಕಾರ ಅಕ್ಟೋಬರ್ 15ರಿಂದ ಶಾಲಾ ಕಾಲೇಜುಗಳು ಆರಂಭಿಸಲು ಮುಂದಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಿಳಿಸಲಾಗಿದೆ.

ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ನಡುವಲ್ಲೇ ಕೇಂದ್ರ ಸರಕಾರ ಶಾಲಾರಂಭದ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರಕಾರ ಅನುಮತಿಯನ್ನು ನೀಡಲಾಗಿದೆಯಾದರೂ ಶಾಲಾರಂಭ ಮಾಡುವ ನಿರ್ಧಾರವನ್ನು ಕೈಗೊಳ್ಳುವುದನ್ನು ಆಯಾಯ ರಾಜ್ಯ ಸರಕಾರಗಳ ವಿವೇಚನೆಗೆ ಬಿಟ್ಟಿದೆ.

ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕುರಿತು ಸ್ವಯಂ ನಿರ್ಧಾರ ತೆಗೆದಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾದ್ರೆ ಪಾಲಕರ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಕಟೈನ್ಮೆಂಟ್ ಝೋನ್ ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಕಾರಣಕ್ಕೂ ಶಾಲೆಗಳಿಗೆ ಹಾಜರಾಗಲು ಅವಕಾಶವನ್ನು ನಿರಾಕರಿಸಲಾಗಿದೆ.ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಹೋಗದೆ ಕೇವಲ ಆನ್ ಲೈನ್ ಮೂಲಕವೇ ಕಲಿಕೆಯನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದೇ ಇದ್ದರೂ ಕೂಡ ಹಾಜರಾತಿಗೆ ಮಾನ್ಯ ಮಾಡಲಾಗುವುದು ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಶಾಲೆಗಳು ಪ್ರಾರಂಭವಾದ ಎರಡರಿಂದ ಮೂರು ವಾರಗಳ ವರಗೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮೌಲ್ಯ ಮಾಪನವನ್ನು ನಡೆಸುವಂತಿಲ್ಲ. ಕೊರೊನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಶಾಲೆ – ಕಾಲೇಜುಗಳಲ್ಲಿ ಕಾರ್ಯಪಡೆಗಳನ್ನು ರಚನೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ತುರ್ತು ಆರೈಕೆ, ತಂಡ, ಸ್ವಚ್ಚತಾ ತಂಡಗಳನ್ನು ರಚಿಸಬೇಕು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕುಳಿತುಕೊಳ್ಳಲ ಆಸನದ ವ್ಯವಸ್ಥೆಯನ್ನು ರೂಪಿಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಪಾಲನೆ ಮಾಡಲೇ ಬೇಕು. ಶಾಲೆಗಳಲ್ಲಿ ಅನುಕೂಲತೆಗೆ ತಕ್ಕಂತೆ ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆಯೂ ಸೂಚಿನೆಯನ್ನು ನೀಡಲಾಗಿದೆ.

ಇನ್ನು ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದ ವೇಳೆಯಲ್ಲಿ ಸಾಕಷ್ಟು ಎಚ್ಚರಿಕೆಯನ್ನು ವಹಿಸಲೇ ಬೇಕು. ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಪ್ರತ್ಯೇಕ ಕ್ಯಾಲೆಂಡರ್ ಪಾಲನೆ ಮಾಡಬೇಕು. ಅಲ್ಲದೇ ಶಾಲಾರಂಭ ಮಾಡುವ ಕುರಿತು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಪರಿಸ್ಥಿತಿಗೆ ಅನುಗುಣವಾಗಿ ಎಸ್ ಒಪಿಗಳನ್ನು ಪಾಲನೆ ಮಾಡುವಂತೆ ತಿಳಿಸಲಾಗಿದೆ.

Leave A Reply

Your email address will not be published.