ಮಂಗಳವಾರ, ಏಪ್ರಿಲ್ 29, 2025
Homeeducationಕರ್ನಾಟಕದಲ್ಲಿ ಮೇ 29 ರಿಂದ ಶಾಲೆಗಳು ಪುನಾರಂಭ : ಹೊಸ ಮಾರ್ಗಸೂಚಿ ಪ್ರಕಟ

ಕರ್ನಾಟಕದಲ್ಲಿ ಮೇ 29 ರಿಂದ ಶಾಲೆಗಳು ಪುನಾರಂಭ : ಹೊಸ ಮಾರ್ಗಸೂಚಿ ಪ್ರಕಟ

- Advertisement -

ಬೆಂಗಳೂರು : ಕರ್ನಾಟಕ ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಕಳೆಯುತ್ತಾ ಬಂದಿದೆ. ಈ ಬಾರಿ ಕಳೆದ ಶೈಕ್ಷಣಿಕ ವರ್ಷಕ್ಕಿಂತ ಹೆಚ್ಚಿನ ರಜೆಯನ್ನು ಶಾಲಾ ಮಕ್ಕಳಿಗೆ ನೀಡಲಾಗಿತ್ತು. ರಜೆಯನ್ನು ಬಹಳ ಸಂತೋಷದಿಂದಲೇ ಕಳೆದಿದ್ದಾರೆ. ಹೀಗಾಗಿ 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯಂತೆ ಈ ಬಾರಿ ಬೇಸಿಗೆ ರಜೆಯು ಈ ವಾರ ಮುಕ್ತಾಯಗೊಳ್ಳುತ್ತಿದ್ದು, ಮುಂದಿನ ವಾರ ಅಂದರೆ ಮೇ 29 ರಿಂದಲೇ ಶಾಲೆಗಳು (School reopens in Karnataka) ಪುನಾರಂಭಗೊಳ್ಳಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆ ವಿವರ :
ಈ ವರ್ಷದ ಶೈಕ್ಷಣಿಕ ವೇಳಾಪಟ್ಟಿ ಕೂಡ ಈಗಾಗಲೇ ಬಿಡುಗಡೆಗೊಂಡಿದ್ದು, ಅಕ್ಟೋಬರ್‌ 8ರಿಂದ ದಸರಾ ಹಾಗೂ ಏಪ್ರಿಲ್‌ 11, 2024 ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ (Department of Public Education) ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯದಾದ್ಯಂತ ಒಂದೇ ರೀತಿಯ ಆದ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ವಾರ್ಷಿಕ, ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಹಾಗೂ ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಮಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮೇ 29, 2023ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿತ್ತು. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳ್ನು ಜಾರಿಗೊಳಿಸಲು ಅನುಕೂಲವಾಗುವಂತೆ ಶೈಕ್ಷಣಿಕ ಅವಧಿಗಳು, ರಜಾ ದಿನಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದ್ದಾರೆ.

ಶಾಲಾ ಕರ್ತವ್ಯದ ದಿನಗಳ ವಿವರ :

  • ದಿನಾಂಕ 29-05-2023 ರಿಂದ ದಿನಾಂಕ 07-10-2023ರವರೆಗೆ ಮೊದಲನೇ ಅವಧಿಗೆ ಶಾಲಾ ಕರ್ತವ್ಯ ದಿನಗಳನ್ನು ನಿಗದಿಪಡಿಸಲಾಗಿದೆ.
  • ದಿನಾಂಕ 25-10-2023ರಿಂದ ದಿನಾಂಕ 10-04-2024ರವರೆಗೆ ಎರಡನೇ ಅವಧಿಗೆ ಶಾಲಾ ಕರ್ತವ್ಯದ ದಿನಗಳನ್ನು ನಿಗದಿಪಡಿಸಲಾಗಿದೆ.

ರಜಾ ದಿನಗಳ ವಿವರ :

  • ದಸರಾ ರಜೆಯನ್ನು ಈ ಬಾರಿ ದಿನಾಂಕ 08-10-2023ರಿಂದ ದಿನಾಂಕ 24-10-203ರವರೆಗೆ ನೀಡಲಾಗಿದೆ.
  • ಬೇಸಿಗೆ ರಜೆಯನ್ನು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು ಬಗ್ಗೆ ವಿವರ :
ಶಾಲಾ ಪುನಾರಂಭದ ಜೊತೆಯಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಇದೆ. ಈ ಬಾರಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುವ ವೇಳೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಪಠ್ಯ ಪುಸ್ತಕ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಿಕ್ಕಿರಲಿಲ್ಲ. ಇದರಿಂದ ಎಚ್ಚೆತ್ತಿರುವ ಶಾಲಾ ಶಿಕ್ಷಣ ಇಲಾಖೆ ಈ ವರ್ಷ ಶಾಲಾ ಆರಂಭದ ಸಮಯದಲ್ಲೇ ಪಠ್ಯಪುಸ್ತಕ ವಿತರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ : CET Exam 2023 : ಸಿಇಟಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಘೋಷಣೆ

ಮೇ. 29 ರಿಂದ ಪ್ರಸಕ್ತ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಲಿವೆ. ಹೀಗಾಗಿ ಪಠ್ಯಪುಸ್ತಕ ಮುದ್ರಣ ಮತ್ತು ಹಂಚಿಕೆ ಮಾಡುವ ಕರ್ನಾಟಕ ಪಠ್ಯಪುಸ್ತಕಗಳ ಸಂಘವು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಶೇ. 95 ರಷ್ಟು ಪುಸ್ತಕಗಳು ಸರಬರಾಜಾಗಿದ್ದು, ವಿದ್ಯಾರ್ಥಿಗಳಿಗೆ ಶಾಲಾ ಆರಂಭದ ಸಮಯಕ್ಕೆ ಪಠ್ಯಪುಸ್ತಕಗಳು ಸಿಗಲಿವೆ ಎನ್ನಲಾಗಿದೆ. ಸದ್ಯ 58.15 ಲಕ್ಷ ವಿದ್ಯಾರ್ಥಿಗಳಿಗೆ 6.39 ಕೋಟಿ ಪಠ್ಯಪುಸ್ತಕಗಳನ್ನು ಮುದ್ರಿಸಲಾಗಿದೆ. ಪಠ್ಯಪುಸ್ತಕಗಳು 562 ಶೀರ್ಷಿಕೆಗಳನ್ನು ಒಳಗೊಂಡಿದ್ದು, 268 ಕೋಟಿ ರೂ. ವೆಚ್ಚಮಾಡಲಾಗಿದೆ.

School reopens in Karnataka : Schools reopen from May 29 in Karnataka : New guidelines published

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular