ಸದ್ಯಕ್ಕೆ ಶಾಲೆ ಆರಂಭವಿಲ್ಲ, ಆತಂಕ ಬೇಡವೆಂದ ಸಚಿವ ಸುರೇಶ್ ಕುಮಾರ್

0

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಸದ್ಯಕ್ಕೆ ಆರಂಭ ಮಾಡುವುದಿಲ್ಲ. ಹೀಗಾಗಿ ಯಾವುದೇ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಎದ್ದಿರುವ ಗೊಂದಲಗಳ ಕುರಿತು ಫೇಸ್ ಬುಕ್ ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಶಾಲೆಗಳಲ್ಲಿ ಪೋಷಕರ ಅಭಿಪ್ರಾಯವನ್ನು ಕ್ರೂಢಿಕರಿಸುವ ನಿಟ್ಟಿನಲ್ಲಿ ಶಾಲೆಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 10,11,12ರಂದು ಎಲ್ಲಾ ಶಾಲೆಗಳಲ್ಲಿ ಪೋಷಕರ ಸಭೆ ನಡೆಯಲಿದೆ. ಪೋಷಕರ ಅಭಿಪ್ರಾಯವನ್ನು ಕ್ರೂಢೀಕರಿಸಿ ಜೂನ್ 15ಕ್ಕೆ ಕೇಂದ್ರ ಸರಕಾರಕ್ಕೆ ತಲುಪಿಸಲಾಗುತ್ತದೆ. ಆ ನಂತರದಲ್ಲಿಯೇ ಶಾಲೆಗಳನ್ನು ಆರಂಭಿಸಬೇಕೆ. ಬೇಡವೇ ಅನ್ನುವ ಕುರಿತು ನಿರ್ಧಾರ ಮಾಡಲಾಗುತ್ತದೆ.

ಕೊರೊನಾ ದೀರ್ಘ ಕಾಲ ಇದ್ದರೆ ಅಲ್ಲಿಯವರೆಗೆ ಶಾಲೆಯನ್ನು ಮುಂದೂಡಬೇಕೇ ಅಥವಾ ಕೊರೊನಾದ ಜೊತೆಗೆ ನಾವು ಬದುಕಬೇಕೇ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಚಿಕನ್ ಗುನ್ಯಾ ರೀತಿಯ ಕಾಯಿಲೆ ಜೊತೆ ಬದುಕುತ್ತಿದ್ದೇವೆ. ಇದೇ ರೀತಿಯಾಗಿ ಕೊರೊನಾ ಜೊತೆ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯೂ ಎದ್ದಿದೆ. ಇದರ ಜೊತೆಯಲ್ಲಿ ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಹೇಗೆ ಎಂಬ ಬಗ್ಗೆ ನಾವು ಚರ್ಚಿಸಬೇಕಿದೆ ಎಂದರು. ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳನ್ನು ಆರಂಭ ಮಾಡುವುದು ಬೇಡವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಪೋಷಕರ ಅಭಿಪ್ರಾಯ ಪಡೆದ ನಂತರವೇ ಶಾಲೆಗಳ ಆರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಆದರೆ ಗ್ರಾಮೀಣ ಭಾಗಗಳಲ್ಲಿರು ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದಿದ್ದಾರೆ.

https://www.facebook.com/100000520624203/videos/3521999407827379/
Leave A Reply

Your email address will not be published.