ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಶಾಲಾ, ಕಾಲೇಜುಗಳು ಬಂದ್ ಆಗಿವೆ. ಆದ್ರೀಗ ಕೊರೊನಾ ಸೋಂಕಿನ ನಡುವಲ್ಲೇ ಶಾಲೆ – ಕಾಲೇಜುಗಳನ್ನು ಸಪ್ಟೆಂಬರ್ 21ರಿಂದ ದೇಶದಾದ್ಯಂತ 9 ರಿಂದ 12ನೇ ತರಗತಿಗಳನ್ನು ಭಾಗಶಃ ಪುನರಾರಂಭಿಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳು ನಿರ್ದಿಷ್ಟ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರ ಆರೋಗ್ಯ ತಪಾಸಣೆಗೆ ಒಳಗಾಗಬೇಕು.

ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಪಾಲನೆ ಮಾಡಲೇ ಬೇಕು. ಅಲ್ಲದೇ ಆಗಾಗ ಹ್ಯಾಂಡ್ ವಾಶ್ ಬಳಸಿ ಕೈ ತೊಳೆಯಬೇಕು. ಕೇವಲ 9 ರಿಂದ12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ತಮ್ಮಪೋಷಕರಿಂದ ಅನುಮತಿಯನ್ನು ಪಡೆದು ಶಿಕ್ಷಕರಿಂದ ಮಾರ್ಗದರ್ಶನ ವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ವಿದ್ಯಾರ್ಥಿಗಳು ಶಾಲೆಗೆ ಬರಲು ಕಡ್ಡಾಯವಾಗಿ ಲಿಖಿತ ರೂಪದಲ್ಲಿ ಪಾಲಕರ ಒಪ್ಪಿಗೆಯನ್ನು ಪಡೆಯಲೇ ಬೇಕಾಗಿದೆ.

ಕೇಂದ್ರ ಸರಕಾರ ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಶಾಲಾ ಚಟುವಟಿಕೆಗಳನ್ನು ಪುನರಾರಂಭಿಸಲು ಅವಕಾಶವನ್ನು ಕಲ್ಪಿಸಿದೆ. ಆದರೆ ಶಾಲೆಯಲ್ಲಿ ಶಿಕ್ಷಕರನ್ನು ವಿದ್ಯಾರ್ಥಿಗಳು ಭೇಟಿ ನೀಡಿ ಮಾರ್ಗದರ್ಶನವನ್ನು ಪಡೆಯಬಹುದಾಗಿದೆ.

ಅಲ್ಲದೇ ಆನ್ ಲೈನ್ ತರಗತಿಯ ಮುಂದುವರಿಕೆಯ ಬಗ್ಗೆಯೂ ಸೂಚನೆ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಕಂಟೈನ್ಮೆಂಟ್ ಝೋನ್ ನಲ್ಲಿರುವ ಶಾಲೆಗಳು, ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದಂತೆ ಸೂಚನೆ ನೀಡಿದೆ.