ಮೈಸೂರು : ರಾಜ್ಯದಲ್ಲಿ ಶಾಲೆಗಳು ಸೆಪ್ಟೆಂಬರ್ 21ರಿಂದ ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆಪ್ಟೆಂಬರ್ 30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಸಲೇ ಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ನಿರ್ಮಾಣವಾಗಿದ್ದ ಅತ್ಯಾಧುನಿಕ ಗ್ರಾಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೋದಲ್ಲೆಲ್ಲಾ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಇನ್ನೂ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ ಇಲಾಖೆ ಮಾಡಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ ಎಂದು ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಅವರಿಗೆ ಈಗಾಗಳೆ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.