ಶಾಲೆಗಳಿಗೆ ಬೇಸಿಗೆ ರಜೆ 2024 : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರಕಾರ

School Summer Holiday 2024 : ಕರ್ನಾಟಕ ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಬೇಸಿಗೆ ರಜೆ (Summer Holiday) ಆರಂಭಕ್ಕೂ ಕೆಲವೇ ದಿನಗಳು ಬಾಕಿ ಉಳಿದಿರುವ ಹೊತ್ತಲೇ ಕರ್ನಾಟಕ ಸರಕಾರ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿ

School Summer Holiday 2024 : ಕರ್ನಾಟಕ ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಬೇಸಿಗೆ ರಜೆ (Summer Holiday) ಆರಂಭಕ್ಕೂ ಕೆಲವೇ ದಿನಗಳು ಬಾಕಿ ಉಳಿದಿರುವ ಹೊತ್ತಲೇ ಕರ್ನಾಟಕ ಸರಕಾರ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಬೇಸಿಗೆ ರಜೆಯ ಅವಧಿಯಲ್ಲಿಯೂ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಲು ಸರಕಾರ ಮುಂದಾಗಿದೆ.

School Summer Holiday 2024 Karnataka Government give Good News for Students
Image Credit to Original Source

ಕರ್ನಾಟಕದಲ್ಲಿ ಬರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಬೇಸಿಗೆ ರಜೆಯಲ್ಲೂ ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟವನ್ನು ಮುಂದುವರಿಸಲು ಚಿಂತನೆ ನಡೆಸಲಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದಿದ್ದಾರೆ.

ಈ ಹಿಂದೆ 8ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆ ನೀಡಲಾಗುತ್ತಿತ್ತು, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡಲಾಗುತ್ತಿತ್ತು, ಇದನ್ನು 10ನೇ ತರಗತಿವರೆಗೆ ವಿಸ್ತರಿಸಲಾಗಿದೆ.ಇಲಾಖೆಯು ಪೌಷ್ಠಿಕ ಆಹಾರ ನೀಡುವತ್ತ ಗಮನಹರಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ : Karnataka Board Exams Cancelled:5,8,9 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್‌‌ ಮಹತ್ವದ ಆದೇಶ

ಮಧ್ಯಾಹ್ನದ ಊಟವು ಭಾರತದಲ್ಲಿನ ಸರಕಾರಿ ಮತ್ತು ಸರಕಾರಿ-ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಅವರ ಪೌಷ್ಟಿಕಾಂಶದ ಮಟ್ಟವನ್ನು ಸುಧಾರಿಸಲು PM-POSHA ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಕೈಗೊಳ್ಳಲಾಗಿದೆ. ನವೆಂಬರ್ 2001 ರಲ್ಲಿ, ಭಾರತದ ಸರ್ವೋಚ್ಚ ನ್ಯಾಯಾಲಯವು ಒಂದು ಆದೇಶವನ್ನು ಅಂಗೀಕರಿಸಿದೆ.

School Summer Holiday 2024 Karnataka Government give Good News for Students
Image Credit to Original Source

ನಾವು ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ಸರ್ಕಾರಿ ಮತ್ತು ಸರ್ಕಾರಿ ನೆರವಿನ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ಮಗುವಿಗೆ ಸಿದ್ಧಪಡಿಸಿದ ಮಧ್ಯಾಹ್ನದ ಊಟವನ್ನು ಒದಗಿಸುವ ಮೂಲಕ ಮಧ್ಯಾಹ್ನದ ಊಟದ ಯೋಜನೆಯನ್ನು ಜಾರಿಗೊಳಿಸಲು ನಿರ್ದೇಶಿಸುತ್ತೇವೆ.

ಇದನ್ನೂ ಓದಿ : ಅನುದಾನಿತ ಶಾಲಾ ಮಹಿಳಾ ಶಿಕ್ಷಕಿಯರಿಗೆ ಗುಡ್‌ನ್ಯೂಸ್‌ : ಶಿಶುಪಾಲನಾ ರಜೆ ಮಂಜೂರು ಮಾಡಿದ ಕರ್ನಾಟಕ ಸರಕಾರ

ಕರ್ನಾಟಕದಲ್ಲಿ ಈ ಬಾರಿ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಎಪ್ರಿಲ್‌ 11 ರಿಂದ ಮೇ 28 ರ ವರೆಗೆ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ ಕಾರಣದಿಂದಾಗಿ ಮಕ್ಕಳ ಬೇಸಿಗೆ ರಜೆಯ ಅವಧಿಯನ್ನು ಕಡಿತಗೊಳಿಸಲಾಗಿತ್ತು. ಆದರೆ ಎರಡೂ ವರ್ಷಗಳಲ್ಲಿಯೂ ಬೇಸಿಗೆ ರಜೆ ಕಡಿತಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ : ಶಾಲೆಗಳಿಗೆ ಸರಕಾರದ ಹೊಸ ರೂಲ್ಸ್‌ : ವಿದ್ಯಾಂಜಲಿ 2.0 ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ

School Summer Holiday 2024 Karnataka Government give Good News for Students

 

Comments are closed.