ಶಾಲೆಗಳಿಗೆ ತಕ್ಷಣದಿಂದಲೇ‌ ಬೇಸಿಗೆ ರಜೆ : ಸಚಿವ ಸುರೇಶ್ ಕುಮಾರ್ ಗೆ ಶಿಕ್ಷಕರಿಂದ ಪತ್ರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಶಾಲೆಗಳಿಗೆ ತಕ್ಷಣವೇ ಬೇಸಿಗೆ ರಜೆಯನ್ನು ಘೋಷಣೆ ಮಾಡುವಂತೆ ಶಿಕ್ಷಕರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ‌ ಮೇಲೆ ದುಷ್ಪರಿಣಾಮವನ್ನು ಬೀರುವ ಸಾಧ್ಯತೆಯಿದೆ. ಪೋಷಕರು ಕೂಡ ಇದರಿಂದಾಗಿ ಅತಂಕಕ್ಕೆ ಒಳಗಾಗಿ ದ್ದಾರೆ. ವರ್ಷಂಪ್ರತಿ ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಸಿ, ಎಪ್ರೀಲ್ 11ರಿಂದ ಬೇಸಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ವ್ಯತ್ಯಾಸವಾಗಿದೆ.
ಸರಕಾರಿ ಶಾಲಗಳಲ್ಲಿ ನಿರಂತರ ಮೌಲ್ಯಮಾಪನ ಜಾರಿಯಲ್ಲಿದ್ದು, ಅದರ ಆಧಾರದಲ್ಲಿ ವಿದ್ಯಾರ್ಥಿ  ಗಳನ್ನು ಪಾಸ್ ಮಾಡಲಾಗುತ್ತದೆ. ಈ ಅಂಶವನ್ನು ಪರಿಗಣಿಸಿ ಕೂಡಲೇ ಎಲ್ಲರಿಗೂ ರಜೆ ಘೋಷಣೆ ಮಾಡುವಂತೆ ಮನವಿ‌ ಮಾಡಿದ್ದಾರೆ‌.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ದೇಶದ 20ಕ್ಕೂ ಅಧಿಕ ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿ ದೆ. ಇದೀಗ ರಾಜ್ಯದಲ್ಲಿ ಶಿಕ್ಷಣ ಇಲಾಖೆ, ಸಚಿವರು ಅದ್ಯಾವ ಕ್ರಮ ಕೈಗೊಳ್ಳುತ್ತಾರೋ ಕಾದು ನೋಡಬೇಕಾಗಿದೆ.

Comments are closed.