Schools-colleges closed: ಡಿಸೆಂಬರ್‌ 17ರಂದು‌ ಶಾಲಾ ಕಾಲೇಜುಗಳು ಬಂದ್: ಪ್ರಸನ್ನ ಕುಮಾರ್‌

ಚಿಕ್ಕಬಳ್ಳಾಪುರ: (Schools-colleges closed) ವಿವಿಧ ಶಾಲೆಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್‌ ಒಕ್ಕೂಟದಿಂದ ಡಿಸೆಂಬರ್‌ 17ರಂದು‌ ಜಿಲ್ಲಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗುವುದು ಎಂದು ಎನ್‌ಎಸ್‌ಯುಐ ನ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್‌ ತಿಳಿಸಿದ್ದಾರೆ.

ಸರಕಾರಗಳು ಶಿಕ್ಷಣ ಕೇಂದ್ರಗಳನ್ನು (Schools-colleges closed) ಕಡೆಗಣಿಸಿ ಶಿಕ್ಷಣದ ವ್ಯಾಪಾರೀಕರಣ ಹಾಗೂ ಖಾಸಗೀಕರಣಕ್ಕೆ ಮುಂದಾಗಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅನೇಕ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿರುವ ವಿದ್ಯಾರ್ಥಿ ವೇತನ ಹಾಗೂ ಸೈಕಲ್‌ ವಿತರಣೆಯನ್ನು ಬಿಜೆಪಿ ಸರಕಾರ ನಿಲ್ಲಿಸಿದೆ. ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಕ್ಕಳ ಪರೀಕ್ಷಾ ಪಲಿತಾಂಶಗಳು ಪ್ರಕಟವಾಗುತ್ತಿಲ್ಲ. ಅಲ್ಲದೇ ನಕಲಿ ಅಂಕಪಟ್ಟಿಗಳ ತಯಾರಿಸುವಿಕೆ ಹೆಚ್ಚಾಗುತ್ತಲೇ ಇದೆ. ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಪಠ್ಯಪುಸ್ತಕ, ಶೂ, ಸಮವಸ್ತ್ರ ಎಲ್ಲದರಲ್ಲೂ ವಿಳಂಬವಾಗುತ್ತಿದೆ.

ಈ ಹಿನ್ನಲೆಯಲ್ಲಿ ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಸಿಎಂ ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು, ಅಲ್ಲದೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ ಪಾಸ್‌ ನೀಡಬೇಕು. ಮಕ್ಕಳಿಗೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳನ್ನು ತಲುಪಲು ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿ ಕೊಡುವುದು, ಶಾಲಾ ಕಾಲೇಜುಗಳ ಶುಲ್ಕವನ್ನು ಕಡಿಮೆ ಮಾಡುವುದು ಹಾಗೂ ಇನ್ನೀತರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ವಿಶ್ವವಿದ್ಯಾಲಯ ಹಾಗೂ ಶಾಲೆಗಳನ್ನು ಬಂದ್‌ ಮಾಡಿ ಡಿ. 17ರಂದು ಪ್ರತಿಭಟನೆ ನಡೆಸಲಾಗುತ್ತದೆ.

ಇದನ್ನೂ ಓದಿ : Education Department Important Order : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಇದನ್ನೂ ಓದಿ : ಮಾಂಡೌಸ್ ಚಂಡಮಾರುತ ನಿರಂತರ ಮಳೆ : ಶಾಲೆಗಳಿಗೆ ರಜೆ ಘೋಷಣೆ

ಇದನ್ನೂ ಓದಿ : ಶಿಕ್ಷಣ ಇಲಾಖೆ ಹೊಸ ಆದೇಶ : ಶಾಲೆಯ ಊಟದ ಸಮಯ ಬದಲಾವಣೆ

ಅಲ್ಲದೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದರು, ಸರಕಾರ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಸಲುವಾಗಿ ವಿದ್ಯಾರ್ಥಿಗಳೇ ಸ್ವಯಂ ಪ್ರೇರಿತರಾಗಿ ಸಮಸ್ಯೆ ಬಗೆಹರಿಸಲು ಸಂಘಟನೆಯೊಂದಿಗೆ ಕೈ ಜೋಡಿಸಿದ್ದಾರೆ ಎಂದು ಎನ್‌ಎಸ್‌ಯುಐ ನ ಜಿಲ್ಲಾ ಉಪಾಧ್ಯಕ್ಷ ಶಿವಾನಂದ್‌ ಹೇಳಿದರು.

ಇದನ್ನೂ ಓದಿ : KSP exam date: 70 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ: ಡಿ.18ರಂದು ನಡೆಯಲಿದೆ ಲಿಖಿತ ಪರೀಕ್ಷೆ

(Schools-colleges closed) District President of NSUI Prasanna Kumar said that schools and colleges will be closed across the district on December 17 by the All India Student Congress Federation to demand the solution of the educational problems of various schools.

Comments are closed.