Second PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ ಬಿಗಿ ಭದ್ರತೆ

ಬೆಂಗಳೂರು: (Second PUC Exam) ಮಾರ್ಚ್‌ 9 ರಿಂದ ಮಾ. 29 ರ ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶನದಂತೆ ಉಭಯ ಜಿಲ್ಲೆಗಳಲ್ಲಿ ಸಕಲ ಸಿದ್ದತೆಗಳನ್ನು ನಡೆಸಲಾಗಿದೆ.

ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. 5,716 ಕಾಲೇಜುಗಳಿಂದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಿದ್ಧರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,109 ಪರೀಕ್ಷಾ ಕೇಂದ್ರಗಳನ್ನ ಗುರುತಿಸಲಾಗಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ಗಳನ್ನು ಕೂಡ ಬಿಡುಗಡೆ ಮಾಡಿದೆ.

ಈ ಬಾರಿ ಪರೀಕ್ಷೆ ಸಮಯದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರಿಗೆಯನ್ನು ಕೂಡ ವಹಿಸಲಾಗಿದೆ. ಪರೀಕ್ಷೆ ಬರೆಯಲು ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿಲ್ಲ. ಇನ್ನೂ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕರ್ನಾಟಕ ಶಿಕ್ಷಣ ಸಚಿವ ಬಿಸಿ ನಾಗೇಶ್‌ ತಿಳಿಸಿದ್ದಾರೆ.

ಅಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಯಾವುದೇ ಅಡಚಣೆಗಳು ಅಗಬಾರದೆನ್ನುವ ಕಾರಣಕ್ಕೆ ಕೆಲವು ಭದ್ರತಾ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದ್ದು, ಶಿಕ್ಷಣ ಇಲಾಖೆ ಕೈಗೊಂಡ ಭದ್ರತಾ ಕ್ರಮಗಳೇನು ಎನ್ನುವ ಬಗ್ಗೆ ಈ ಕೆಳಗೆ ನೀಡಲಾಗಿದೆ.

*. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
*. ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
*. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ
*. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ
*. ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ
*. ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ
*. ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ
*. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ
*. ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ
*. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ
*. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ
*. ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ.

ಇದನ್ನೂ ಓದಿ : NEET PG 2023 : ಮಾರ್ಚ್ 31ರಂದು ನೀಟ್ ಪರೀಕ್ಷೆ ಫಲಿತಾಂಶ !

Second PUC Exam: Second PUC Exam from tomorrow: Tight security around the exam center

Comments are closed.