Secondary PUC assessment: ದ್ವಿತೀಯ ಪಿಯುಸಿ ಮೌಲ್ಯಮಾಪನ ನಾಳೆಯಿಂದ ಆರಂಭ : ಫಲಿತಾಂಶದಲ್ಲಿ ವಿಳಂಭ ಸಾಧ್ಯತೆ

ಬೆಂಗಳೂರು : (Secondary PUC assessment) 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಾಳೆ ಅಂದರೆ ಏಪ್ರಿಲ್‌ 5 ರಿಂದ ಆರಂಭವಾಗಲಿದೆ. ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಭವಾಗುವ ಸಾಧ್ಯತೆಯಿದೆ.

ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ನಾಳೆಯಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಈಗಾಗಲೇ ಮೌಲ್ಯಮಾಪನ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಳೆಯಿಂದ ಎಲ್ಲಾ ೬೫ ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ.

ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಉಪನ್ಯಾಸಕರು ಹಾಜರಾಗುವ ಸಾಧ್ಯತೆ ಇರುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉದ್ದೇಶದಂತೆ ಮೇ ಮೊದಲ ವಾರದಲ್ಲೇ ಅಥವಾ ಚುನಾವಣೆಗೂ ಮುನ್ನವೇ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಆರ್‌ಟಿಇ ಎನ್‌ಇಪಿ ಗೊಂದಲ: ರಾಷ್ಟ್ರೀಯ ಶಿಕ್ಷಣ ನೀತಿ ಬದಲಾದರೂ ಯಥಾಸ್ಥಿತಿ ಇರಲಿದೆ ಆರ್‌ಟಿಇ

ಇದನ್ನೂ ಓದಿ : NCERT 12 ನೇ ತರಗತಿ ಇತಿಹಾಸ ಪಠ್ಯಪುಸ್ತಕದಲ್ಲಿ ಮಹತ್ತರ ಬದಲಾವಣೆ

ಇದನ್ನೂ ಓದಿ : NEET UG 2023 : ನೀಟ್‌ ಆಕಾಂಕ್ಷಿಗಳಿಗೆ ಮಹತ್ವದ ಮಾಹಿತಿ : ಅರ್ಜಿ ನಮೂನೆಗೆ ಇನ್ನು 5 ದಿನಗಳಷ್ಟೇ ಬಾಕಿ

Secondary PUC assessment: Secondary PUC assessment starts from tomorrow : Delay in result likely

Comments are closed.