Special classes for 5th 8th : 5 -8ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ : ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು : (Special classes for 5th 8th) ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಮಾಪನ ಪರೀಕ್ಷೆ ನಡೆಸಲಾಗಿದ್ದು, 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಬರುವ 2023-24ನೇ ಸಾಲಿನಿಂದ ವಿಶೇಷ ತರಗತಿ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಮತ್ತು SSLC ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಸುವುದಕ್ಕೆ ನಿರ್ಧಾರಗಳನ್ನು ಕೈಗೊಂಡಿದೆ .

ಶಾಲಾ ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿಯ ಮೌಲ್ಯಮಾಪನ ಪರೀಕ್ಷೆ ನಡೆಸಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡಬಾರದು ಎಂದು ಆಯಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಹಾಗಾಗಿ ಪೂರಕ ಪರೀಕ್ಷೆ ನಡೆಸಿದರೂ ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಉದ್ದೇಶವಿಲ್ಲ. ಬದಲಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸುಧಾರಣೆ ತರಲು ವಿಶೇಷ ತರಗತಿಗಳನ್ನು ನಡೆಸಿ, ನಂತರದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ನೀಡಿ ಮುಂದಿನ ತರಗತಿಗೆ ಕಳುಹಿಸಲಾಗುತ್ತದೆ.

ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಂತ ಹಂತವಾಗಿ ಶಿಕ್ಷಣ ಇಲಾಖೆಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಕ್ಷಣದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಸುಧಾರಣೆ ತರುವ ಉದ್ದೇಶದಿಂದ ಪೂರಕ ಪರೀಕ್ಷೆ ನಡೆಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ : Postpone NEET UG 2023 : ನೀಟ್ ಪರೀಕ್ಷೆ ಮುಂದೂಡುವಂತೆ ಪ್ರಧಾನಿ ಮೋದಿಗೆ ವಿದ್ಯಾರ್ಥಿಗಳಿಂದ ಮನವಿ

ಇದನ್ನೂ ಓದಿ : National Education Policy : ಈ ವರ್ಷದಿಂದ ಪದವಿ ಅವಧಿ 4 ವರ್ಷ

ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆ ಮತ್ತು ವಿಷಯ ಕಲಿಕೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯುವುದಕ್ಕಾಗಿ ಮೌಲ್ಯಾಂಕನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಿದ್ದು, ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿ ಹಾಗೂ ಪಾಲಕರಿಗೆ ಮಾತ್ರ ತಿಳಿಸಲಾಗುತ್ತಿದೆ ಎಂಬ ಮಾಹಿತಿ ತಿಳಿಸಲಾಗಿತ್ತು. ಇದೀಗ ಕಲಿಕೆಯಲ್ಲಿ ಹಿಂದಿರುವ ಮಕ್ಕಳಿಗೆ ವಿಶೇಷ ತರಗತಿಗಳನ್ನು ಕೈಗೊಂಡು ಪೂರಕ ಪರೀಕ್ಷೆಯನ್ನು ನಡೆಸಿ ಮುಂದಿನ ತರಗತಿಗೆ ಕಳುಹಿಸುವ ನಿರ್ಧಾರವನ್ನು ಇದೀಗ ಶಿಕ್ಷಣ ಇಲಾಖೆ ಕೈಗೊಂಡಿದೆ.

Special class for 5th-8th class students : Ordered by Education Department

Comments are closed.