SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಮಾರ್ಚ್ 18 ರಿಂದ ಪರೀಕ್ಷೆ ಆರಂಭ- ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

sslc 2026 exam time table: ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿವರ:

  • ಪರೀಕ್ಷಾ ಅವಧಿ: ಮಾರ್ಚ್ 18 ರಿಂದ ಏಪ್ರಿಲ್ 2, 2026.
  • ಸಮಯ: ಪ್ರತಿದಿನ ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ.
  • ವಿದ್ಯಾರ್ಥಿಗಳ ಸಂಖ್ಯೆ: ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ (8,12,855 ಹೊಸಬರು, 62,845 ಪುನರಾವರ್ತಿತ ಮತ್ತು 27,189 ಖಾಸಗಿ ಅಭ್ಯರ್ಥಿಗಳು).
  • ಪರೀಕ್ಷಾ ಕೇಂದ್ರಗಳು: ರಾಜ್ಯಾದ್ಯಂತ ಒಟ್ಟು 2,871 ಕೇಂದ್ರಗಳು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 (ಮೇ ತಿಂಗಳ ವೇಳಾಪಟ್ಟಿ):

ಮೇ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದ್ದು, ಮೇ 18 ರಂದು ಪ್ರಥಮ ಭಾಷೆ ಹಾಗೂ ಮೇ 23 ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

PM KISAN 22nd Instalment: 9 ಕೋಟಿ ರೈತರಿಗೆ ಬಿಗ್ ಅಪ್‌ಡೇಟ್; ಹಣ ಜಮಾ ಯಾವಾಗ?

ವಿದ್ಯಾರ್ಥಿಗಳಿಗೆ ಸೂಚನೆ:

ಪರೀಕ್ಷಾ ಕೇಂದ್ರಕ್ಕೆ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ತಲುಪಲು ಮತ್ತು ಅಧಿಕೃತ ವೇಳಾಪಟ್ಟಿಯನ್ನು ಮತ್ತೊಮ್ಮೆ ಶಾಲಾ/ಕಾಲೇಜುಗಳಲ್ಲಿ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories