ಇಂದು ರಾಜ್ಯಾದ್ಯಂತ ಎಸ್​ಎಸ್ಎಲ್‌ಸಿ ಫಲಿತಾಂಶ: ತೃತೀಯ ಭಾಷೆಗೆ ಗ್ರೇಡಿಂಗ್​ ಬದಲು ಅಂಕ..!

ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಘೋಷಣೆಯಾಗಲಿದೆ.

ತೃತೀಯ ಭಾಷೆ ಹಿಂದಿಗೆ ಗ್ರೇಡಿಂಗ್​ ನೀಡುವ ವಿಚಾರದಲ್ಲಿ ಹಿನ್ನೆಡೆ ಅನುಭವಿಸಿರುವ ರಾಜ್ಯ ಸರ್ಕಾರ ಮುಜುಗುರ ಅನುಭವಿಸಿದೆ . ಈ ಎಲ್ಲಾ ಗೊಂದಲಗಳ ನಡುವೆ ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಘೋಷಣೆಯಾಗಲಿದೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಾರಿ ದ್ವಿಭಾಷಾ ನೀತಿ ಜಾರಿ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್ಸಿ ಫಲಿತಾಂಶ ಭಾರೀ ಸದ್ದು ಮಾಡಿತ್ತು. ಆದರೆ ಹೈಕೋರ್ಟ್​ನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಗ್ರೇಡಿಂಗ್​ ಬದಲು ಅಂಕವನ್ನೇ ನೀಡುವಂತೆ ಹೇಳಿತ್ತು. ಈ ಸಂಬಂಧ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಸಭೆಯಲ್ಲಿ ಹೈಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಂದು ಮಧ್ಯಾಹ್ನ 12 ಗಂಟೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸಲಿದ್ದೇವೆ. ಫಲಿತಾಂಶ ಪ್ರಕಟಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಗ್ರೇಸ್​ ಮಾರ್ಕ್ಸ್​ ಬಗ್ಗೆಯೂ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: SSLC 2026 ಪ್ರಕಟ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ತೃತೀಯ ಭಾಷೆಗೆ ಗ್ರೇಡಿಂಗ್​ ನೀಡುವ ಬಗ್ಗೆ ಉಂಟಾದ ಗೊಂದಲದ ಬಗ್ಗೆ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದೆ. ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ತೃತೀಯ ಭಾಷೆಯ ಅಂಕಗಳ ಸುಧಾರಣೆಗೆ ಎರಡನೇ ಪರೀಕ್ಷೆ ಅವಕಾಶ ನೀಡಲಾಗುತ್ತದೆ. ಯಾವುದೇ ಶುಲ್ಕ ವಿಧಿಸದೇ ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories