ವಿದ್ಯಾರ್ಥಿಗಳೇ ಗಮನಿಸಿ…! ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಫಲಿತಾಂಶ ಸಂಭಾವ್ಯ ದಿನಾಂಕ ಪ್ರಕಟ
ಏಪ್ರಿಲ್ 8 ರಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಏಪ್ರಿಲ್ 20ರವರೆಗೂ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ.
SSLC Result Date 2026: ರಾಜ್ಯಾದ್ಯಂತ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಏಪ್ರಿಲ್ 20ರವರೆಗೂ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಈ ನಡುವೆ ರಾಜ್ಯ ಶಿಕ್ಷಣ ಇಲಾಖೆಯು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಣೆಯ ಅಧಿಕೃತ ಮಾಹಿತಿ ನೀಡಿದೆ.
ಶಿಕ್ಷಣ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಏಪ್ರಿಲ್ 24ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಳ್ಳಬಹುದು ಎಂಬ ಸಂಭಾವ್ಯ ದಿನಾಂಕ ಬಿಡುಗಡೆಗೊಂಡಿದೆ. ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು , ಇವರ ಭವಿಷ್ಯ ಶೀಘ್ರದಲ್ಲಿಯೇ ನಿರ್ಧಾರಗೊಳ್ಳಲಿದೆ.
ಇದನ್ನೂ ಓದಿ: ಮುಂದುವರಿದ ಎಸ್ಎಸ್ಎಲ್ಸಿ ದ್ವಿಭಾಷಾ ನೀತಿ ಗೊಂದಲ: ಹೈಕೋರ್ಟ್ ಮೆಟ್ಟಿಲೇರಿದ ತೃತೀಯ ಭಾಷೆ ವಿವಾದ
ಇನ್ನು ಪರೀಕ್ಷೆಗೆ ಹಾಜರಾಗದ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ಪೂರಕ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನೂ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ 18ರಿಂದ ಮೇ 25ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎನ್ನಲಾಗಿದ್ದು ಈ ಪರೀಕ್ಷೆಯ ಫಲಿತಾಂಶ ಜೂನ್ 1ರಂದು ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಇನ್ನು ಇದರ ಜೊತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7ರಂದು ಬಿಡುಗಡೆಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಉತ್ತರ ಪತ್ರಿಕಾ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ.



