ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಮುಹೂರ್ತ ಕೊನೆಗೂ ಫೀಕ್ಸ್ ಆಗಿದೆ. ಜೂನ್ 2ನೇ ವಾರದಲ್ಲಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸುರೇಶ್ ಕುಮಾರ್ ಅವರು, ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಜೂನ್ಎರಡನೇ ವಾರದ ಪರೀಕ್ಷೆ ನಡೆಸಲು ಈಗಾಗಲೇ ಶಿಕ್ಷಣ ಇಲಾಖೆ ಸಿದ್ದತೆಗಳನ್ನು ಮಾಡಿಕೊಂಡಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಸುಮಾರು 10 ಅಥವಾ 15 ದಿನಗಳ ಮೊದಲೇ ದಿನಾಂಕವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಹೆಚ್ಚುವರಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ಮಾಸ್ಕ್, ಸ್ಯಾನಿಟೈಸರ್ ಹಾಗೂ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗುವುದು ಬೇಡಾ ಎಂದಿದ್ದಾರೆ.