ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ, ಇಲ್ಲಾ ಮುಂದೂಡಿ : ಕುಮಾರಸ್ವಾಮಿ ಆಗ್ರಹ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 25 ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಇತರ ರಾಜ್ಯಗಳಂತೆಯೇ ರದ್ದು ಮಾಡಿ, ಇಲ್ಲವಾದ್ರೆ ಅಗಸ್ಟ್ ಅಥವಾ ಸಪ್ಟೆಂಬರ್ ವರೆಗೆ ಆದ್ರೂ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಹೊಂದಿಕೊಂಡು ಕನಿಷ್ಠ 16 ಲಕ್ಷ ಕ್ಕೂ ಪೋಷಕರಿದ್ದಾರೆ. ಪರೀಕ್ಷೆಯನ್ನು ನಡೆಸಿದ್ರೆ ಶಿಕ್ಷಕರು, ಕಟುಂಬಸ್ಥರು ಸೇರಿದಂತೆ 25 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಹರಡುವ ಆತಂಕವಿದೆ. ಇಂತಹ ಸಂದರ್ಭದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸುವುದು ಸರಿಯಲ್ಲ.

ಪಕ್ಕದ ರಾಜ್ಯಗಳಲ್ಲಿ ಈಗಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿವೆ. ನಮ್ಮ ರಾಜ್ಯದಲ್ಲಿಯೂ ಅಂತಹದ್ದೇ ನಿರ್ಧಾರವನ್ನು ಕೈಗೊಳ್ಳಲಿ. ಇಲ್ಲಾ ರಾಜ್ಯ ಸರಕಾರಕ್ಕೆ ಪರೀಕ್ಷೆ ನಡೆಸಲೇ ಬೇಕು ಅಂತಿದ್ರೆ ಪರಿಸ್ಥಿತಿಯನ್ನು ನೋಡಿಕೊಂಡು ಅಗಸ್ಟ್ ಅಥವಾ ಸಪ್ಟೆಂಬರ್ ನಲ್ಲಿ ಪರೀಕ್ಷೆಯನ್ನು ನಡೆಸಲಿ.

ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಜೊತೆಗೂ ಮಾತನಾಡುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Leave A Reply

Your email address will not be published.