ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಬಾರಿ ಜುಲೈ 19 ಮತ್ತು 22 ರಂದುಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನ ವನ್ನು ಕಡಿತ ಮಾಡಲಾಗಿತ್ತು. ಆದ್ರೂ ರಾಜ್ಯದಲ್ಲಿ ಬರೋಬ್ಬರಿ 96.65 % ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ವಿದ್ಯಾರ್ಥಿಗಳು ಫಲಿತಾಂಶವನ್ನು ಪ್ರೌಢಶಾಲಾ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ sslc.karnataka.gov.in or kseeb.kar.nic.in or karresults.nic.in ಮೂಲಕ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ರೋಲ್ ನಂಬರ್ ಬಳಸಿ ಫಲಿತಾಂಶವನ್ನುವೀಕ್ಷಿಸಬಹುದಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿ ಕೂಡ ಆನ್‌ಲೈನ್‌ನಲ್ಲಿಯೇ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಫಲಿತಾಂಶವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ ಮಾಡಿ :
ಒಂದೊಮ್ಮೆ ವಿದ್ಯಾರ್ಥಿಗಳಿಗೆ ಈ ಬಾರಿಯ ಫಲಿತಾಂಶದ ಕುರಿತು ಯಾವುದೇ ಅಸಮಧಾನಗಳಿದ್ದರೂ ಕೂಡ ವಿದ್ಯಾರ್ಥಿಗಳು ಮೌರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಮರು ಪರೀಕ್ಷೆಗೆ ಕೂಡ ಹಾಜರಾಗಬಹುದಾಗಿದೆ.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಶೇ.99.62 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ನಿಂದ 67 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 152 ಜನ ಐಸೋಲೇಷನ್ ಕೊಠಡಿಯಲ್ಲಿ ಬರೆದಿದ್ದಾರೆ. 10,693 ಜನ ಪರೀಕ್ಷಾ ಕೇಂದ್ರ ಬದಲಸಿ ಪರೀಕ್ಷೆ ಬರೆದಿದ್ದಾರೆ. 2,870 ಜನ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದಲೇ ಪರೀಕ್ಷೆ ಬರೆದಿದ್ದರು.