SSLC Exams 2023: ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (Karnataka Secondary Education Examination Board – KSEEB) ಎಸ್ಎಸ್ಎಲ್ ಸಿ ( Karnataka SSLC Exam 2023) ಅಂತಿಮ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 31ರಂದು ಆರಂಭಗೊಳ್ಳಲಿರುವ ಪರೀಕ್ಷೆಯು ಎಪ್ರೀಲ್ 15ರ ವರೆಗೆ ನಡೆಯಲಿದೆ. ಈ ಹಿಂದೆ ಎಸ್ಎಸ್ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದ್ರೀಗ ಇಲಾಖೆ ಅಂತಿಮ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

SSLC Exams 2023 : ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ :

  • ಮಾರ್ಚ್ 31 (ಶುಕ್ರವಾರ ) – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
  • ಎಪ್ರೀಲ್ 04 ( ಮಂಗಳವಾರ)– ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
  • ಎಪ್ರೀಲ್ 06 (ಗುರುವಾರ )– ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ಎಪ್ರೀಲ್ 08 ( ಶನಿವಾರ ) – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • ಎಪ್ರೀಲ್ 10 ( ಸೋಮವಾರ) – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ಎಪ್ರೀಲ್ 12 ( ಬುಧವಾರ ) – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • ಎಪ್ರೀಲ್ 15 ( ಶನಿವಾರ ) – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

ಈಗಾಗಲೇ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು www.sslc.karnataka.gov.in ವೆಬ್ ಸೈಟ್ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ : New rule to government workers: ಮೊಮ್ಮಕ್ಕಳಿಗೂ ಸಿಗುತ್ತೆ ಅನುಕಂಪದ ನೆಲೆಯಡಿಯಲ್ಲಿ ಸರಕಾರಿ ಕೆಲಸ: ಹೊಸ ನಿಯಮ ಜಾರಿ

ಇದನ್ನೂ ಓದಿ : GATE exam 2023: ಗೇಟ್‌ ಪರೀಕ್ಷೆಯ ದಿನಾಂಕ, ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ಇಂಗ್ಲೀಷ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

SSLC Exams 2023 Final Time Table Announced Here is complete information

Comments are closed.