SSLC Exams 2024 : ಬೆಂಗಳೂರು : ಬಿರು ಬೇಸಿಗೆಯ ನಡುವೆ ಪರೀಕ್ಷಾ ಜ್ವರವೂ ಜೋರಾಗಿದೆ. ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಗಳು ಜೋರಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧವಾಗುತ್ತಿದ್ದಾರೆ. ಈಗ ಬೇಸಿಗೆಯ ಬಿಸಿಲಿನ ತಾಪದಲ್ಲಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ಮಕ್ಕಳಿಗೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ.

ಮಧ್ಯಾಹ್ನದ ಊಟದ ಚಿಂತೆಯಿಲ್ಲದೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಸರ್ಕಾರ, ಎಸ್ ಎಸ್ ಎಲ್ ಸಿ ಎಕ್ಸಾಂ ಬರೆಯುವ ಮಕ್ಕಳಿಗೆ ಬಿಸಿಯೂಟ ವಿತರಿಸುವಂತೆ ಇಲಾಖೆಗೆ ಆದೇಶಿಸಿದೆ. ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ದಿನಗಣನೆ ನಡೆದಿದ್ದು, ಗ್ರಾಮೀಣ ಭಾಗವೂ ಸೇರಿದಂತೆ ರಾಜ್ಯದಾದ್ಯಂತ ಲಕ್ಷಾಂತರ ಮಕ್ಕಳು ತಮ್ಮ ಭವಿಷ್ಯಕ್ಕಾಗಿ ಎಸ್ ಎಸ್ ಎಲ್ ಸಿ ಬೋರ್ಡ್ ಪರೀಕ್ಷೆಗೆ ಸಿದ್ಧವಾಗಿದ್ದಾರೆ.
ಈಗ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸಲು ಸೂಚಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಾರ್ಷಿಕ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶ ಹೊರಡಿಸಲಾಗಿದ್ದು, ಇದು ಪೋಷಕರು ಹಾಗೂ ಮಕ್ಕಳಲ್ಲಿ ಖುಷಿ ಹೆಚ್ಚಿಸಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ 25.03.2024 ರಿಂದ ಪ್ರಾರಂಭಗೊಂಡು, ದಿನಾಂಕ 06.04.2024ರವರೆಗೆ ನಡೆಯಲಿದೆ. ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ,ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿಯೂ ಸಹ 1-10ನೇ ತರಗತಿಯವರೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೇ ಪೂರೈಸುವುದು.
ಇದನ್ನೂ ಓದಿ : 5,8,9ನೇ ತರಗತಿ ಬೋರ್ಡ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ
ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದರೊಂದಿಗೆ, ಸುರಕ್ಷಿತವಾಗಿ ಶುಚಿ-ರುಚಿಯಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವುದು ಹಾಗೂ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ, ಬಿಸಿಯೂಟ ಆಹಾರದ ಉತ್ತಮ ಗುಣಮಟ್ಟ,ಸ್ವಚ್ಛತೆ ಮತ್ತು ನೈರ್ಮಲ್ಯ ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು,ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಆದ್ಯತೆ ನೀಡಿ,ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲು ಸೂಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ಗ್ರಾಮೀಣ ಭಾಗದಿಂದ ದೂರದ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯುವ ಮಕ್ಕಳಿಗೆ ಮಧ್ಯಾಹ್ನದ ಹಸಿವು ನೀಗಿಸಿಕೊಳ್ಳಲು ಸಹಾಯವಾಗಲಿದೆ. ಬೇಸಿಗೆಯ ತಾಪದ ನಡುವೆ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ತಾಪಮಾನ 40 ಗಡಿ ದಾಟಿದ್ದರಿಂದ ವಿದ್ಯಾರ್ಥಿಗಳಿಗೆ ಬೇಸಿಗೆಯ ಬಿಸಿಲಿನಲ್ಲಿ ಊಟ ತಿಂಡಿಯಾಗಿ ಅಲೆದಾಡುವುದು ತಲೆನೋವಿನ ಕೆಲಸವಾಗಿತ್ತು. ಈಗ ಸರ್ಕಾರ ಬಿಸಿಯೂಟ ನೀಡಲು ಆದೇಶಿಸಿದ್ದು ನೆರವು ಸಿಕ್ಕಂತಾಗಿದೆ.
ಇದನ್ನೂ ಓದಿ : ಬೇಸಿಗೆ ರಜೆ ವಿಸ್ತರಣೆ ? ಜೂನ್ ಎರಡನೇ ವಾರದಲ್ಲಿ ಬಾಗಿಲು ತೆರೆಯಲಿವೆ ಶಾಲೆಗಳು !
ಅಡುಗೆ ಕೇಂದ್ರವಿರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳು 1168 ಸರ್ಕಾರಿ ಹಾಗೂ 884 ಅನುದಾನಿತ ಶಾಲೆಗಳ ಬಿಸಿಯೂಟ ಸ್ವೀಕರಿಸಲು ಸಿದ್ಧವಿರುವ ಹಾಗೂ ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸಿ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಈ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸುವಂತೆಯೂ ಸರ್ಕಾರ ಸೂಚಿಸಿದೆ. ಇದಲ್ಲದೇ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿದೆ.
ಇದನ್ನೂ ಓದಿ : ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ, ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ಮಕ್ಕಳು ತಮ್ಮ ಪ್ರವೇಶ ಪತ್ರ ತೋರಿಸಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಭಾರಿ ರಾಜ್ಯದಲ್ಲಿ ಒಟ್ಟು ಮೂರು ಭಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಉತ್ತೀರ್ಣ ಅಥವಾ ಅನುತ್ತೀರ್ಣರಾದವರು ಮೂರು ಭಾರಿ ಪರೀಕ್ಷೆ ಬರೆದು ತಮ್ಮ ಅಂಕ ಉತ್ತಮಪಡಿಸಿಕೊಳ್ಳಲು ಅವಕಾಶವಿದೆ.
SSLC Exams 2024 Good News for Students: Govt Announces Special Gift