ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಪೋಷಕರೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಜೂನ್ 25ರಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಯಸಲು ಉದ್ದೇಶಿಸಲಾಗಿದೆ. ಆದರೆ ಪರೀಕ್ಷೆ ನಡೆಸುವ ಕುರಿತು ಪರ ವಿರೋಧದ ಮಾತುಗಳು ಕೇಳಿಬರುತ್ತಿದ್ದು, ಪರೀಕ್ಷೆಯನ್ನೇ ರದ್ದು ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ. ಆದರೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವಂತೆ ಸೂಚನೆಯನ್ನು ನೀಡಿತ್ತು. ಆದ್ರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಬೆಳಗಾವಿ ಜಿಲ್ಲೆಯ ಪೋಷಕರಾದ ರಾಜಶ್ರೀ ನಾಗರಾಜ್ ಎಂಬವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರಕಾರ ಸಲ್ಲಿಸಿರುವ ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸಬಹುದು ಎಂದು ಹೈಕೋರ್ಟ್ ಸೂಚಿಸಿತ್ತು. ಆದ್ರೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿರುವುದರಿಂದಾಗಿ ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನೋ ಗೊಂದಲ ವ್ಯಕ್ತವಾಗಿದೆ.