ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲು ಮುಂದಾಗಿದೆ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದಾಗಿ ಶಿಕ್ಷಣ ಇಲಾಖೆ ಹೇಳುತ್ತಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಹೇಗೆ ನಡೆಯುತ್ತೇ ಅನ್ನುವ ಕುರಿತ ಪ್ರಾತ್ಯಕ್ಷಿಕೆಯೊಂದು ನಡೆದಿದ್ದು, ವಿಡಿಯೋ ಇದೀಗ ವೈರಸ್ ಆಗಿದೆ.
ಜೂನ್ 25ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭಗೊಳ್ಳಲಿದೆ. ರಾಜ್ಯ ಸರಕಾರ ಪರೀಕ್ಷೆಗೆ ಬೇಕಾದ ಅಗತ್ಯಕ್ರಮಗಳನ್ನು ಕೈಗೊಂಡಿದೆ. ಈ ನಡುವಲ್ಲೇ ಪರೀಕ್ಷೆಯ ಕುರಿತು ಸಾಕಷ್ಟು ಪರ ವಿರೋಧದ ಚರ್ಚೆಯೂ ನಡೆಯುತ್ತಿದೆ. ಆದರೆ ಶಿಕ್ಷಣ ಸಚಿವರು ಹಾಗೂ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಪರೀಕ್ಷೆ ಮಾಡಿಯೇ ತೀರುವುದಾಗಿ ಹೇಳುತ್ತಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ರಾಜ್ಯದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಪರೀಕ್ಷಾ ಸಿದ್ದತೆಗಳ ಕುರಿತು ಪರಿಶೀಲನೆಯನ್ನು ನಡೆಸಿದ್ದಾರೆ.

ಈ ನಡುವಲ್ಲೇ ಬೆಳಗಾವಿ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾವ ರೀತಿಯಲ್ಲಿ ನಡೆಸಲಾಗುತ್ತದೆ. ಯಾವೆಲ್ಲಾ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಅನ್ನುವ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಗಿದೆ.

ಪ್ರಾತ್ಯಕ್ಷಿಕೆಯಲ್ಲಿ ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್, ಪರೀಕ್ಷಾ ಕೊಠಡಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳು. ಪರೀಕ್ಷಾ ಮುಗಿಯುತ್ತಿದ್ದಂತೆಯೇ ವಿದ್ಯಾರ್ಥಿಗಳು ಕೊಠಡಿಯಿಂದ ಸಾಮಾಜಿಕ ಅಂತರದಲ್ಲಿ ಹೊರಬರುತ್ತಿರುವ ಕುರಿತು ಚಿತ್ರಿಸಲಾಗಿದೆ.