ಜೂನ್ 21-ಜುಲೈ5ರ ವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : 2020-21ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಜೂನ್ 21ರಿಂದ ಆರಂಭವಾಗಲಿದ್ದು, ಜುಲೈ 5ರ ವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಧಾರವಾಡಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆ ಭಿನ್ನವಾಗಿದೆ. ಪ್ರತೀ ತಾಲೂಕಿನಲ್ಲಿ ಮುಖ್ಯೋಪಾಧ್ಯಾಯರಿಗಾಗಿ ವರ್ಕ್ ಶಾಪ್ ಮಾಡಲಾಗುತ್ತಿದೆ. ಎಸ್ಎಸ್ಎಲ್ ಸಿ ಫಲಿತಾಂಶದ ದೃಷ್ಟಿಯಿಂದ ಹೊಸ ಹೊಸ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಪೋನ್ ಇನ್ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಶಿಕ್ಷಣದ ಸಮಸ್ಯೆ ಪರಿಹಾರಕ್ಕೆ ಸಹಕಾರಿಯಾಗಲಿದೆ ಎಂದರು.

ಎಪ್ರೀಲ್ 2ನೇ ತಾರೀಕಿನಿಂದ ರಾಜ್ಯದಾದ್ಯಂತ ಪ್ರವಾಸವನ್ನು ಕೈಗೊಳ್ಳುತ್ತಿದ್ದೇನೆ. ಶಾಲೆಗಳಲ್ಲಿ ಪರೀಕ್ಷಾ ಸಿದ್ದತೆ ಮಕ್ಕಳ ಮೇಲೆ ಪರಿಣಾಮ ಬೀರಬಾರದು. ಮಕ್ಕಳ ಮೇಲೆ ಯಾವುದೇ ರೀತಿಯಲ್ಲಿಯೂ ಒತ್ತಡ ಹೇರಬಾರದು. ಕೊರೊನಾ ವೈರಸ್ ಸೋಂಕು ಶಿಕ್ಷಣ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವುದರಿಂದಾಗಿ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಒಂದು ವಾರ ಪರಿಸ್ಥಿತಿಯನ್ನು ಅಧ್ಯಯನ ನಡೆಸಿ 1 ನೇ ತರಗತಿ ಆರಂಭಿಸುವ ಕುರಿತು ಚಿಂತನೆ ನಡೆಸುತ್ತೇವೆ. ಮಧ್ಯಾಹ್ನದ ಬಿಸಿಯೂಟ ಆರಂಭಿಸುವ ಕುರಿತು ಕೇಂದ್ರ ಸರಕಾರ ಅನುಮತಿ ಬೇಕಾಗಿದೆ. 2021-22ರ ಶೈಕ್ಷಣಿಕ ವರ್ಷವನ್ನು ಜುಲೈ 15ರಿಂದ ಆರಂಭಿಸಲಾಗುವುದು. ಮುಂದಿನ ವರ್ಷ ಎಲ್ಲಾ ತರಗತಿಗಳನ್ನು ಒಟ್ಟಿಗೆ ಆರಂಭಿಸುವ ಚಿಂತನೆಯಿದೆ ಎಂದಿದ್ದಾರೆ.

Comments are closed.