SSLC Exams 2022 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಧಿಕೃತ ವೇಳಾಪಟ್ಟಿ ಪ್ರಕಟ : ಯಾವ ವಿಷಯಕ್ಕೆ ಯಾವಾಗ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು (SSLC Exams 2022) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಇಲಾಖೆ ಇದೀಗ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಿದೆ. ಮಾರ್ಜ್ 28ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಏಪ್ರಿಲ್ 11ರ ವರೆಗೆ ನಡೆಯಲಿದೆ.

ಕಳೆದ ಎರಡು ವರ್ಷಗಳಿಂದಲೂ ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಸಾಕಷ್ಟು ತೊಡಕುಗಳು ಎದುರಾಗಿತ್ತು. ಇದೀಗ ಪ್ರೌಢಶಾಲಾ ಪರೀಕ್ಷಾ ಮಂಡಳಿ ಈ ಬಾರಿ ಮಾರ್ಚ್‌ನಲ್ಲಿಯೇ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡು ಕೆಲ ದಿನಗಳ ಹಿಂದೆಯಷ್ಟೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಅಲ್ಲದೇ ಈ ಕುರಿತು ಯಾವುದೇ ರೀತಿಯ ತಕರಾರು ಸಲ್ಲಿಕೆ ಮಾಡಲು ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಅಂತಿಮವಾಗಿ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ವೇಳಾಪಟ್ಟಿ :

ಮಾರ್ಚ್‌ ೨೮ ಸೋಮವಾರ : ಪ್ರಥಮ ಭಾಷೆ ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಎನ್ ಸಿ ಇ ಆರ್ ಟಿ ), ಸಂಸ್ಕೃತ )

ಮಾರ್ಚ್‌ 30 ಬುಧವಾರ : ದ್ವಿತೀಯ ಭಾಷೆ ( ಇಂಗ್ಲೀಷ್, ಕನ್ನಡ )

ಎಪ್ರೀಲ್‌ 01 ಶುಕ್ರವಾರ : ಕೋರ್ ಸಬ್ಜೆಕ್ಟ್ ( ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ )

ಎಪ್ರೀಲ್‌ 04 ಸೋಮವಾರ :ಕೋರ್ ಸಬ್ಜೆಕ್ಟ್ ( ಗಣಿತ, ಸಮಾಜ ಶಾಸ್ತ್ರ )

ಎಪ್ರೀಲ್‌ 06 ಬುಧವಾರ : ಸಮಾಜ ವಿಜ್ಞಾನ

ಎಪ್ರೀಲ್‌ 08 ಶುಕ್ರವಾರ : ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಎಪ್ರೀಲ್ 11‌ ಕೋರ್ ಸಬ್ಜೆಕ್ಟ್ ( ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ )

ಈ ಬಾರಿ ಪೂರ್ವ ಸಿದ್ದತಾ ಪರೀಕ್ಷೆಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆ ಈಗಾಗಲೇ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 21 ರಿಂದ ಫೆಬ್ರವರಿ 26 ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.

ಫೆಬ್ರವರಿ 21 : ಪ್ರಥಮ ಭಾಷೆ (ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲೀಷ್, ಸಂಸ್ಖ್ರತ )
ಫೆಬ್ರವರಿ 22 : ಸಮಾಜ ವಿಜ್ಞಾನ
ಫೆಬ್ರವರಿ 23 : ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ )
ಫೆಬ್ರವರಿ 24 : ಗಣಿತ
ಫೆಬ್ರವರಿ 25 : ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್ )
ಫೆಬ್ರವರಿ 26 : ಕೋರ್ ಸಬ್ಜೆಕ್ಟ್ : ವಿಜ್ಞಾನ

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : ಕೊರೋನಾ ಭಯದ ನಡುವೆಯೂ ಪಿಯುಸಿ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮ

( SSLC Exams 2022 final timetable release )

Comments are closed.