SSlC Exams- Free travel: ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ

ಬೆಂಗಳೂರು: (SSlC Exams- Free travel) 2022-23 ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ಅಂತಿಮ ಪರೀಕ್ಷೆಗಳನ್ನು ಸರಕಾರದ ಆದೇಶದಂತೆ ಮಾರ್ಚ್‌ 31 ರಿಂದ ಏಪ್ರಿಲ್‌ 15 ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸರಕಾರಿ ಬಸ್‌ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿಕೊಂಡಿದೆ.

ರಾಜ್ಯದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳು ನಡೆಯುವ ದಿನಾಂಕಗಳಲ್ಲಿ ವಿದ್ಯಾರ್ಥಿಗಳು ಎಸ್‌ ಎಸ್‌ ಎಲ್‌ ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್‌ ಬರಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ.

ಇದರನ್ವಯ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಿಗಮದ ಎಲ್ಲಾ ಚಾಲಕ ಹಾಗೂ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಇದರ ಜೊತೆಗೆ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸು ಆಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ, ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಚಾಲನಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗುವುದು.

ಚಾಲನಾ ಸಿಬ್ಬಂದಿಗಳು ಈ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ಹಾಗೂ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸುವಂತೆಯೂ ಹಾಗೂ ಈ ಸುತ್ತೋಲೆಯನ್ನು ಬಸ್‌ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಈ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ

ಇದನ್ನೂ ಓದಿ : NEET MDS Score Card 2023 : ವೈದ್ಯಕೀಯ ಪ್ರವೇಶ ಪರೀಕ್ಷೆ ಅಂಕಪಟ್ಟಿ ನಾಳೆ ಬಿಡುಗಡೆ

ಇದನ್ನೂ ಓದಿ : GATE CoAP 2023 Registration: ಮೇ 20 ರಂದು ಮೊದಲ ಸುತ್ತಿನ ಸೀಟು ಹಂಚಿಕೆ

SSlC Exams- Free travel : Free travel in KSR TC bus for students

Comments are closed.