SSLC EXAMS : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್ : ಪರೀಕ್ಷೆಯ ದಿನ ಉಚಿತ ಪ್ರಯಾಣ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಆತಂಕದ ನಡುವಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದೆ. ಜುಲೈ 19 ಹಾಗೂ 22 ರಂದು ಪರೀಕ್ಷೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಶೀಕ್ಷಣ ಇಲಾಖೆ ಗುಡ್ ನ್ಯೂಸ್‌ ಕೊಟ್ಟಿದ್ದು, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೊಠಡಿಗಳನ್ನು ಹೆಚ್ಚಿಸಿರುವ ಶಿಕ್ಷಣ ಇಲಾಖೆ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೂಡ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದೀಗ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ ಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ದಿನದಂದು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಅಷ್ಟೇ ಅಲ್ಲಾ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ಬಸ್‌ ನಿಲ್ದಾಣ ಅಲ್ಲದ ಸ್ಥಳದಲ್ಲಿ ಇದ್ದರೂ ಕೂಡ ಕೋರಿಕೆಯ ಮೇಲೆ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಬಸ್ಸಿನಲ್ಲಿ ಪ್ರಯಾಣ ಮಾಡುವ ವಿದ್ಯಾರ್ಥಿಗಳು ಕಡ್ಡಾಯವಾಗಿದೆ ಪ್ರವೇಶ ಪತ್ರವನ್ನು ಹೊಂದಿರಲೇ ಬೇಕು. ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಕೆಎಸ್‍ಆರ್‌ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಈಗಾಗಲೇ ತನ್ನ ಚಾಲಕರು ಹಾಗೂ ನಿರ್ವಾಹಕರಿಗೆ ಈ ಬಗ್ಗೆ ಸೂಚನೆಯನ್ನು ನೀಡಿದೆ. ಯಾವೊಬ್ಬ ವಿದ್ಯಾರ್ಥಿಯೂ ಕೂಡ ಪರೀಕ್ಷೆಯಿಂದ ವಂಚಿತರಾಗಬಾರದು ಅನ್ನೋ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿ ವಿದ್ಯಾರ್ಥಿಗಳಿಗೆ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ನೀಡಲಾಗಿತ್ತು. ಈ ಬಾರಿಯೂ ಅದನ್ನು ಮುಂದುವರಿಸಲಾಗಿದೆ.

Comments are closed.