ಬೆಂಗಳೂರು : ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಒಟ್ಟು ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ ಸಿ ಪರೀಕ್ಷೆಗಾಗಿ ರಾಜ್ಯದಲ್ಲಿ ಒಟ್ಟಾರೆ 6000 ಕೇಂದ್ರಗಳನ್ನು ಸಿದ್ದಪಡಿಸ ಲಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಶಿಕ್ಷಕ ಮತ್ತು ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಈ ಕುರಿತು ಜಿಲ್ಲಾ ಉಪ ನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಲಸಿಕೆ ನೀಡಲು ಸೂಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರ ಕೋರಿಯ ಮೇರೆಗೆ ಮೌಲ್ಯಾಂಕನ ಅವಧಿಯನ್ನು ವಿಸ್ತರಿಸಲಾಗಿದೆ. ಅಲ್ಲದೇ ಎಲ್ಲಾ ಜಿಲ್ಲೆಗಳಲ್ಲೂ ಲಾಕ್‌ಡೌನ್ ಅಂತ್ಯ ಗೊಳ್ಳುವ ವರೆಗೂ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.