ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಹೆಚ್ಚಳದಿಂದ ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೊರೊನಾ ಎರಡನೇ ಅಲೆಯ ಸೊಂಕು ನಿಯಂತ್ರಣಕ್ಕೆ ಬಂದ ನಂತರ ಪರೀಕ್ಷಾ ದಿನಾಂಕ ಪ್ರಕಟವಾಗಲಿದೆ ಎಂದಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
