SSLC ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ಸಾಮಾಜಿಕ ಅಂತರ, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮಾರ್ಗಸೂಚಿಯನ್ನು ಪ್ರಕಟಿಸಿದೆ.

ರಾಜ್ಯದಲ್ಲಿ ಜೂನ್ 25ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗಳು ಜುಲೈ4ರ ವರೆಗೂ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆಯನ್ನು ನೀಡಿದೆ.

ಪರೀಕ್ಷಾ ಮಾರ್ಗಸೂಚಿಯಲ್ಲೇನಿದೆ ?

  • ವಿದ್ಯಾರ್ಥಿಗಳು ಪರೀಕ್ಷೆಯ ಆರಂಭಕ್ಕೆ ಒಂದೂವರೆ ಗಂಟೆಯ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
  • ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳನ್ನು ಸ್ಯಾನಿಸೈಟ್ ಗೆ ಒಳಪಡಿಸಬೇಕು.
  • ಸ್ಯಾನಿಟೈಸ್ ಬಳಿಕ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನೂ ಕೂಡ ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು.
  • ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಬೇಕು. ಒಂದೊಮ್ಮೆ ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದಿದ್ದರೆ, ಪರೀಕ್ಷಾ ಕೇಂದ್ರಗಳಲ್ಲಿಯೇ ಮಾಸ್ಕ್ ನೀಡುವ ವ್ಯವಸ್ಥೆಯನ್ನು ಮಾಡಭೇಕು.
  • ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಪಾಲನೆ ಮಾಡುವಂತೆ ಶಿಕ್ಷಕರು ಕ್ರಮವಹಿಸಬೇಕು. ( ಅಪ್ಪಿಕೊಳ್ಳುವುದು, ಮುಟ್ಟುವುದು, ಉಗುಳುವುದಕ್ಕೆ ಅವಕಾಶ ಕಲ್ಪಿಸಬಾರದು )
    *ವಿದ್ಯಾರ್ಥಿಗಳು ಅನಾರೋಗ್ಯ ಕಂಡುಬಂದರೆ ಮೇಲ್ವಿಚಾರಕರಿಗೆ ತಿಳಿಸಬೇಕು.
  • ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.
  • ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂಧಿಗಳನ್ನು ಹೊರತು ಪಡಿಸಿ, ಪೋಷಕರಾಗಲಿ ಅಥವಾ ಯಾವುದೇ ಇತರ ವ್ಯಕ್ತಿಗಳ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸುವುದು.
  • ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
  • ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಬಸ್ಸಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಮಾತ್ರವಲ್ಲ ಬಸ್ಸುಗಳನ್ನು ಸ್ಯಾನಿಟೈಸ್ ಮಾಡಿರಬೇಕು.
  • ಪರೀಕ್ಷಾ ಕೇಂದ್ರದ ಯಾವುದೇ ಅಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಮಕ್ಕಳೊಂದಿಗೆ ನಿಕಟ ಸಂಪರ್ಕಕ್ಕೆ ಬರುವಂತಿಲ್ಲ.
  • ಶೌಚಾಲಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಸಾಬೂನು ಲಭ್ಯವಿರುವಂತೆ ಮುಖ್ಯ ಅಧೀಕ್ಷಕರು ನೋಡಿಕೊಳ್ಳಬೇಕು.
  • ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಯಾವುದೇ ಸಿಬ್ಬಂದಿಗಳಿಗೆ ಯಾವುದೇ ರೋಗ ಲಕ್ಷಣ ಇಲ್ಲಾ ಎಂದು ಖಚಿತ ಪಡಿಸಿಕೊಳ್ಳಬೇಕು.
  • ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡುವ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡಿರಬೇಕು.
  • ಕೊಠಡಿಯ ಮೇಲ್ವಿಚಾರಕರು ತಮ್ಮ ಮೇಜಿನ ಮೇಲೆ ಸ್ಯಾನಿಟೈಸರ್ ಕಡ್ಡಾಯವಾಗಿ ಹೊಂದಿರಬೇಕು.
Leave A Reply

Your email address will not be published.