ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಗಸ್ಟ್ 10ರಂದು ಮಧ್ಯಾಹ್ನ 3 ಗಂಟೆಗೆ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ನಡೆದಿತ್ತು. ರಾಜ್ಯದ ಸುಮಾರು 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಈ ಹಿಂದೆ ಅಗಸ್ಟ್ 6 ಅಥವಾ 8 ರಂದು ಫಲಿತಾಂಶ ಪ್ರಕಟವಾಗುತ್ತೆ ಅಂತಾ ಹೇಳಲಾಗಿದ್ದು, ಈ ಕುರಿತು ಒಂದಿಷ್ಟು ಗೊಂದಲಗಳು ಏರ್ಪಟ್ಟಿದ್ದವು. ಇದೀಗ ಸಚಿವ ಸುರೇಶ್ ಕುಮಾರ್ ಅವರೇ ಎಸ್ಎಸ್ಎಲ್ ಸಿ ಫಲಿತಾಂಶದ ದಿನಾಂಕವನ್ನು ಪ್ರಕಟಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಫಲಿತಾಂಶ http://www.karresults.nic.in ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಮಾತ್ರವಲ್ಲ ವಿದ್ಯಾರ್ಥಿಗಳು SMS ಮೂಲಕವೂ ಫಲಿತಾಂಶವನ್ನು ಪಡೆಯಬಹುದಾಗಿದೆ.
