SSLC Result : ಫಲಿತಾಂಶಕ್ಕೆ ವೆಬ್‌ಸೈಟ್‌ ಸಮಸ್ಯೆಯೇ : ಹಾಗಾದ್ರೆ ಇಲ್ಲಿ Click ಮಾಡಿ Result ನೋಡಿ

  • ಸುಶ್ಮಿತಾ ಸುಬ್ರಹ್ಮಣ್ಯ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ವೆಬ್‌ಸೈಟ್‌ ಓಪನ್‌ ಆಗದೆ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ. ನೀವೂ ಕೂಡ ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ರೆ, ನಾವು ಕೆಳಗೆ ನೀಡಿರುವ ವೆಬ್‌ಸೈಟ್‌ ಲಿಂಕ್‌ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಿ.

ಈ ಬಾರಿ ಕೊರೋನಾ ಆಂತಕದ ನಡುವೆಯೂ ನಡೆದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು 157 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 623 ಅಂಕ 289 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 622 ಅಂಕಗಳನ್ನು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 621 ಅಂಕಗಳನ್ನು 449 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 620 ಅಂಕ ಗಳನ್ನು 28 ವಿದ್ಯಾರ್ಥಿಗಳು ಪಡೆದಿದ್ದಾರೆ.

ಇನ್ನೂಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರು ಉತ್ತರದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ರೆ. ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮದುಗಿರಿ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯ. ಉಡುಪಿ, ಮಂಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಗದಗ, ಧಾರವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಶಿರಸಿ, ಉತ್ತರ ಕನ್ನಡ, ಯಾದಗಿರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಬೀದರ್ ಹಾಗೂ ಬಳ್ಳಾರಿ ಕೊನೆಯ ಸ್ಥಾನವನ್ನು ಗಳಿಸಿದೆ.

ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಯನ್ನು ದಾಖಲಿಸೋ ಮೂಲಕ sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದು. ಇದಲ್ಲದೇ ನಾಳೆ ಶಾಲೆಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೀಡಿರುವಂತ ಪೋಷಕರ ಮೊಬೈಲ್ ಸಂಖ್ಯೆಗಳಿಗೂ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ಮಾಹಿತಿಯು ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದರು..

ಇಂದು ಪ್ರಕಟಗೊಂಡಂತ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಜಾಲತಾಣಗಳ ಮೂಲಕ ವೀಕ್ಷಿಸಬಹುದು. ಇದಲ್ಲದೇ ವಿದ್ಯಾರ್ಥಿಗಳು ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಪಡೆಯಬಹುದು ಎಂಬುದಾಗಿ ಶಿಕ್ಷಣ ಸಚಿವರು ತಿಳಿಸಿದ್ದರು. ಆದ್ರೇ.. ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಣೆಗಾಗಿ ನೀಡಲಾಗಿದ್ದಂತ sslc.karnataka.gov.in, www.karresults.nic.in ಎರಡು ಜಾಲತಾಣಗಳು ಎರರ್ ಬರುತ್ತಿದ್ದು, ವಿದ್ಯಾರ್ಥಿಗಳಿಗೆ ಫಲಿತಾಂಶ ವೀಕ್ಷಿಸಲು ಒದ್ದಾಡುವಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

Comments are closed.