ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದ ಶಿಕ್ಷಣ ಇಲಾಖೆ ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಕೊರೊನಾ ಲಾಕ್ ಡೌನ್ ನಡುವಲ್ಲೇ ಶಿಕ್ಷಕರು ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಿದ್ದಾರೆ. ಮುಂದಿನ 10 ದಿನಗಳ ಒಳಗಾಗಿ ಮೌಲ್ಯಮಾಪನ ಸಂಪೂರ್ಣವಾಗಿ ಮುಕ್ತಾಗೊಳ್ಳಲಿದೆ. ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.