ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಏರ್ಪಟ್ಟಿರುವ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ. ನಾಳೆ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದಿದ್ದಾರೆ.

ಈಗಾಗಲೇ ಎಸ್ಎಸ್ಎಲ್ ಸಿ ಮೌಲ್ಯ ಮಾಪನ ಕಾರ್ಯ ಮುಕ್ತಾಯಗೊಂಡಿದೆ. ಹೀಗಾಗಿ ಸೋಮವಾರ ಅಥವಾ ಮಂಗಳವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಆದರೆ ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ. ವಿದ್ಯಾರ್ಥಿಗಳು ಆರಾಮವಾಗಿರಿ ಎಂದಿದ್ದಾರೆ.

ಮಾಧ್ಯಮಗಳಲ್ಲಿ ನಾಳೆ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತೆ ಅನ್ನುವ ಸುದ್ದಿ ಪ್ರಕಟವಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಗೊಂದಲ ಏರ್ಪಟ್ಟಿತ್ತು. ಆದ್ರೀಗ ಸಚಿವರೇ ಖುದ್ದು ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಈ ಹಿಂದೆ ಸಚಿವ ಸುರೇಶ್ ಕುಮಾರ್ ಅವರು ಅಗಸ್ಟ್ 6 ಅಥವಾ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದರು. ಇದೀಗ ಸೋಮವಾರ ಅಥವಾ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ.