ಬೆಂಗಳೂರು : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರೌಢಶಾಲಾ ಪರೀಕ್ಷಾ ಮಂಡಳಿ ಮಧ್ಯಾಹ್ನ 3.30 ನಿಮಿಷಕ್ಕೆ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಲಿದೆ.

ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಿಂದ ಹಾಗೂ ಎಸ್ಎಂಎಸ್ ಮೂಲಕವೂ ಫಲಿತಾಂಶವನ್ನು ಪಡೆಯಲು ಇಲಾಖೆ ಅವಕಾಶವನ್ನು ಕಲ್ಪಿಸಿದೆ.
ಕೊರೊನಾ ವೈರಸ್ ಸೋಂಕಿನ ನಡುವಲ್ಲೆ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶಿಕ್ಷಕರು ಕೊರೊನಾ ಆತಂಕದಲ್ಲಿಯೇ ಮೌಲ್ಯಮಾಪನ ಕಾರ್ಯವನ್ನು ಮುಗಿಸಿದ್ದರು. ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಥಿಗಳು ತಮ್ಮ ಯಾವುದೇ ಮೊಬೈಲ್ ಸಂಖ್ಯೆಯಿಂದಲೂ ಫಲಿತಾಂಶವನ್ನು ಪಡೆಯಬಹುದಾಗಿದೆ. ಮೊಬೈಲ್ ಮೂಲಕ ಫಲಿತಾಂಶವನ್ನು ಪಡೆಯಲು KSEEB10 ಎಂದು ಟೈಪ್ ಮಾಡಿ, ನಂತರ ನೋಂದಣಿ ಸಂಖ್ಯೆಯನ್ನು ಬರೆದು 5626 ಸಂಖ್ಯೆಗೆ ಮೆಸೇಜ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಫಲಿತಾಂಶ ಲಭ್ಯವಾಗಲಿದೆ.

ರಾಜ್ಯದ ಸುಮಾರು ಎರಡು ಸಾವಿರಕ್ಕೂ ಅಧಿಕ ಪರೀಕ್ಷಾ ಕೇಂದ್ರದಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ವಿದ್ಯಾರ್ಥಿಗಳ ಫಲಿತಾಂಶ ನಾಳೆ ಹೊರಬೀಳಲಿದೆ. ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ http://karresults.nic.in ನಿಂದ ಪಡೆಯ ಬಹುದಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಕಳುಹಿಸಲು ಇಲಾಖೆ ಸಿದ್ದತೆ ಮಾಡಿಕೊಂಡಿದೆ.