SSLC Exams : ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಬಿರು ಬೇಸಿಗೆಯ ನಡುವೆ ಪರೀಕ್ಷಾ ಜ್ವರ ಶುರುವಾಗಿದ್ದು ರಾಜ್ಯದಾದ್ಯಂತ ಎಸ್ ಎಸ್ ಎಲ್‌ಸಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ರಾಜ್ಯಾದ್ಯಂತ ಸೋಮವಾರದಿಂದ SSLC ಪರೀಕ್ಷೆಗೆ (SSLC Exams ) ಆರಂಭವಾಗಲಿದ್ದು ಏಪ್ರಿಲ್ 11 ರವರೆಗೆ ನಡೆಯಲಿದೆ. ಕೊರೋನಾದಿಂದ ಬಹುತೇಕ ಆನ್ ಲೈನ್ ಶಿಕ್ಷಣವನ್ನೇ ಪಡೆದಿರುವ ರಾಜ್ಯದ ವಿವಿಧ ಜಿಲ್ಲೆಗಳ ಮಕ್ಕಳು ಸೋಮವಾರ ಆಫ್ ಲೈನ್ ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದಲ್ಲಿ ಒಟ್ಟು 8,73,846 SSLC ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. ಈ ಪೈಕಿ 8,20,888 ವಿದ್ಯಾರ್ಥಿ ಗಳು ಹೊಸತಾಗಿ‌ ಪರೀಕ್ಷೆ ಬರೆಯುತ್ತಿದ್ದರೇ, 46,200 ಮಕ್ಕಳು ಖಾಸಗಿಯಾಗಿ ಪರೀಕ್ಷೆ ಎದುರಿಸಲಿದ್ದಾರೆ.

ಒಟ್ಟು ಪರೀಕ್ಷೆ ಎದುರಿಸುತ್ತಿರುವ ಮಕ್ಕಳಲ್ಲಿ 4,52,732 ಗಂಡು ಮಕ್ಕಳಿದ್ದು 4,21,110 ಹೆಣ್ಣುಮಕ್ಕಳು ಹಾಗೂ 04 ತೃತೀಯ ಲಿಂಗಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆ( SSLC Exams ) ಬರೆಯ ಲಿದ್ದಾರೆ. ಇನ್ನೂ ಕೇವಲ ಸಾಮಾನ್ಯ ಮಕ್ಕಳು ಮಾತ್ರವಲ್ಲ ವಿಭಿನ್ನ ಸಾಮರ್ಥ್ಯವುಳ್ಳ 5307 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದಕ್ಕಾಗಿ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಇದುವರೆಗೂ 15,387 ಶಾಲೆಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿವೆ. ಈ ಪೈಕಿ 5,717 ಸರ್ಕಾರಿ ಶಾಲೆಗಳು,3,412 ಅನುದಾನಿತ ಹಾಗೂ 6,258 ಅನುದಾನ ರಹಿತ ಶಾಲೆಗಳು ರಿಜಿಸ್ಟರ್ ಮಾಡಿಕೊಂಡಿವೆ. ಇನ್ನು ರಾಜ್ಯದಲ್ಲಿ ಒಟ್ಟು 3,444 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 1357 ಸರ್ಕಾರಿ ಶಾಲೆಗಳು, 1009 ಅನುದಾನಿತ ಹಾಗೂ 978 ಅನುದಾನ ರಹಿತ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಕಾರ್ಯ ನಿರ್ವಹಿಸಲಿದೆ. ಇದನ್ನು ಹೊರತುಪಡಿಸಿ ಸಾಮಾನ್ಯ ಕೇಂದ್ರಗಳು – 3,275 ಖಾಸಗಿ ಕೇಂದ್ರಗಳು 169 ಇವೆ. 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ನಡೆದಿದ್ದು, 3,444 ಮುಖ್ಯ ಅಧಿಕ್ಷಕರಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. 49,817 ಕೊಠಡಿ ಮೇಲ್ವಿಚಾರಕರು ಮಕ್ಕಳ ಎಸ್ಎಸ್ಎಲ್ ಸಿ ಪರೀಕ್ಷೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ರಾಜ್ಯ SSLC ನಿರ್ದೇಶಕ ಹೆಚ್.ಎನ್ ಗೋಪಾಲ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಇನ್ನೂ ರಾಜ್ಯದಾದ್ಯಂತ ಎಸ್‌ಎಸ್ ಎಲ್ ಸಿ ಪರೀಕ್ಷೆಗೆ ( SSLC Exams ) ಬಸ್ ನಲ್ಲಿ ತೆರಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಪ್ರಯಾಣ ಹಾಗೂ ಪರೀಕ್ಷಾ ಕೇಂದ್ರಗಳ ಬಳಿಯೇ ನಿಲುಗಡೆ ಸೌಲಭ್ಯವನ್ನು ಒದಗಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಲ್ ಟಿಕೇಟ್ ತೋರಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ಇದನ್ನೂ ಓದಿ : ಹಿಜಾಬ್ ಬಿಚ್ಚಿಟ್ಟು ಪರೀಕ್ಷೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಸರ್ಕಾರದ ಸ್ಪಷ್ಟ ಸೂಚನೆ

ಇದನ್ನೂ ಓದಿ : ಶಿಕ್ಷಕರ ಬದಲು ತರಗತಿಗೆ ಬಂತು ರೋಬೋ : ಮೊದಲ‌ ಪ್ರಯೋಗ ಯಶಸ್ವಿ

( SSLC Exams Start Tomorrow, circular for Department of Education )

Comments are closed.