SSLC Exams : ಒತ್ತಡಕ್ಕೆ ಒಳಗಾಗ ಬೇಡಿ : ಶಾಂತಿಯಿಂದ ಪರೀಕ್ಷೆ ಬರೆಯಿರಿ: ಮಕ್ಕಳಿಗೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು : ರಾಜ್ಯದಾದ್ಯಂತ ಇಂದಿನಿಂದ SSLC ಪರೀಕ್ಷೆ(SSLC Exams ) ಆರಂಭಗೊಂಡಿದ್ದು 8 ಲಕ್ಷಕ್ಕೂ ಅಧಿಕ‌ ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ. ಆದರೆ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ(SSLC Exams ) ಬರೆಯುತ್ತಿರುವ‌ ಮಕ್ಕಳು ಕಳೆದ ಎರಡು ವರ್ಷಗಳಿಂದ ಪರೀಕ್ಷೆಯನ್ನೇ ಬರೆದಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದಲ್ಲಿ ಒಟ್ಟು 8 ಲಕ್ಷದ 73 ಸಾವಿರಕ್ಕೂ ಅಧಿಕ ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ.ತರಗತಿ ಕಡಿತ, ಕೊರೋನಾ ಕಾರಣಕ್ಕೆ ಪೂರ್ಣ ಪ್ರಮಾಣದಲ್ಲಿ ಪಠ್ಯ ಕ್ರಮ ಬೋಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಿಲೆಬಸ್ ಅನ್ನು 80% ಕ್ಕೆ ಇಳಿಸಲಾಗಿದೆ. ಈ ವರ್ಷದ SSLC ಪರೀಕ್ಷೆ (SSLC Exams ) ಎದುರಿಸುತ್ತಿರುವ ಕೊರೋನಾ ಕಾರಣಕ್ಕೆ 8 ಮತ್ತು 9 ನೇ ತರಗತಿಯಲ್ಲೂ ಪರೀಕ್ಷೆ ಎದುರಿಸಿಲ್ಲ.

ಇದನ್ನು ಸರಕಾರ ಹಾಗೂ ಶಿಕ್ಷಣ ಇಲಾಖೆ ಗಮನಿಸಿದೆ. ಹೀಗಾಗಿ ಈ ಬಾರಿ ವಿಶೇಷ ರೀತಿಯಲ್ಲಿ ಸಿದ್ಧತಾ ಪರೀಕ್ಷೆ ಕೈಗೊಂಡು ಮಕ್ಕಳನ್ನು ಪರೀಕ್ಷೆಗೆ ಸಿದ್ಧಪಡಿಸುವ ಪ್ರಕ್ರಿಯೆ ನಡೆದಿದೆ. ರಾಜ್ಯದ ಎಲ್ಲಾ ಮಕ್ಕಳು ಕೂಡ ಪ್ರತಿಭಾವಂತರು, ಭಯ ಪಡುವ ಅಗತ್ಯವಿಲ್ಲ. ನಮ್ಮ ಶಿಕ್ಷಕರು ಕೂಡ ಮಕ್ಕಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ಇನ್ನೂ ಹಿಬಾಜ್ ಕಂಟಕದ ಬಗ್ಗೆಯೂ ಮಾತನಾಡಿದ ಸಚಿವರು,ಹಿಜಾಬ್ ಮಕ್ಕಳ ಕಲಿಕೆಗೆ ಅಡ್ಡಿಯಾಗಬಾರದು. ಕೆಲ ಸಂಘಟನೆಗಳು ಮಕ್ಕಳನ್ನು ಮುಂದಿಟ್ಟು ಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಈಗಾಗಲೆ ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಇಲಾಖೆ ಸ್ಪಷ್ಟ ಪಡಿಸಿದೆ.ಧರ್ಮ ಬದಿಗಿಟ್ಟು ಶಿಕ್ಷಣ ಪಡೆಯಲು ಮುಸ್ಲಿಂ ವಿದ್ಯಾರ್ಥಿನಿಗಳು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಭದ್ರತೆ ಬಗ್ಗೆಯೂ ಮಾತನಾಡಿದ ಸಚಿವರು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಗೃಹ ಇಲಾಖೆಗೆ ಮನವಿ ಮಾಡಿಕೊಂಡಿದ್ದೇನೆ. ಮಂಗಳೂರು, ಉಡುಪಿ ಭಾಗದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮಕ್ಕಳು ಯಾವುದೇ ಆತಂಕ ಅಡ್ಡಿ ಇಲ್ಲದೆ ಪರೀಕ್ಷೆ ಬರೆಯಬೇಕು ಎಲ್ಲಾ ಮಕ್ಕಳಿಗೂ ಆಲ್ ದಿ ಬೆಸ್ಟ್ ಒಳಿತಾಗಲಿದೆ ಎಂದು ಆಶಿಸಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಇಂದಿನಿಂದ ಹಿಜಾಬ್ ಧರ್ಮಸಂಕಟದ ನಡುವೆ ಪರೀಕ್ಷೆ (SSLC Exams ) ಆರಂಭಗೊಂಡಿದ್ದು ಏನಾಗುತ್ತೆ ಅನ್ನೋದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ಸಿಬಿಎಸ್‌ಇ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ

ಇದನ್ನೂ ಓದಿ : ಹಿಜಾಬ್ ಬಿಚ್ಚಿಟ್ಟು ಪರೀಕ್ಷೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಸರ್ಕಾರದ ಸ್ಪಷ್ಟ ಸೂಚನೆ

SSLC Exams starts, education minister appeals to Students

Comments are closed.