ಮಾ.31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಪರೀಕ್ಷಾ ಕೆಂದ್ರಗಳ ಸುತ್ತ ಬಿಗಿ ಬಂದೋಬಸ್ತ್‌, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಂಗಳೂರು: (SSLC EXAMS-Tight security ) 2022-23 ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ಅಂತಿಮ ಪರೀಕ್ಷೆಗಳು ಮಾರ್ಚ್‌ 31 ರಿಂದ ಏಪ್ರಿಲ್‌ 15 ರವರೆಗೆ ನಡೆಯಲಿದ್ದು, ಅಂತಿಮ ಪರೀಕ್ಷೆಗೆ ಈಗಾಗಲೇ ಶಿಕ್ಷಣ ಇಲಾಖೆ ಸಿದ್ದತೆಗಳನ್ನು ಮಾಡಿಕೊಂಡಿದೆ. ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, 200 ಮೀಟರ್‌ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದಲ್ಲದೇ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಸರಕಾರಿ ಬಸ್‌ ಗಳಲ್ಲಿ ಉಚಿತ ಪ್ರಯಾಣವನ್ನು ಕೂಡ ಮಾಡಬಹುದಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರೀಕ್ಷೆ (SSLC EXAMS) ಬರೆಯುವ ವಿದ್ಯಾರ್ಥಿಗಳು, ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ವ್ಯಕ್ತಿಗಳನ್ನು ಕೇಂದ್ರದ ಒಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಇದಲ್ಲದೇ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಟೈಪಿಂಗ್‌, ಜೆರಾಕ್ಸ್‌, ಫ್ಯಾಕ್ಸ್‌ ಅಂಗಡಿಗಳನ್ನು ತೆರೆಯುವುದು, ಮೊಬೈಲ್‌ ಬಳಕೆಯನ್ನು ನಿಷೇಧಿಸಲಾಗಿದ್ದು, ಕೆಂದ್ರದ ಸುತ್ತಮುತ್ತ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಸ್‌ ನಲ್ಲಿ ಉಚಿತ ಪ್ರಯಾಣ:

ರಾಜ್ಯದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ವಿದ್ಯಾರ್ಥಿಗಳು ಎಸ್‌ ಎಸ್‌ ಎಲ್‌ ಸಿ ಪರೀಕ್ಷಾ (SSLC EXAMS) ಪ್ರವೇಶ ಪತ್ರವನ್ನು ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್‌ ಬರಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ (SSLC EXAMS) ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಿಗಮದ ಎಲ್ಲಾ ಚಾಲಕ ಹಾಗೂ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಇದರ ಜೊತೆಗೆ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸು ಆಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ, ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಚಾಲನಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗುವುದು.

ಇದನ್ನೂ ಓದಿ : 5th and 8th Class Public Examination: ‘ಸಾರ್ವಜನಿಕ ಪರೀಕ್ಷೆ’ ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ

ಇದನ್ನೂ ಓದಿ : Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೋರ್ಡ್‌ ಪರೀಕ್ಷೆ, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ವಿದ್ಯಾರ್ಥಿಗಳು ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ :

ಪರೀಕ್ಷಾ ಕೇಂದ್ರಕ್ಕೆ ತಪ್ಪದೆ ಪ್ರವೇಶ ಪತ್ರ (ಹಾಲ್ ಟಿಕೇಟ್) ತೆಗೆದುಕೊಂಡು ಹೋಗಿ.
ಪರೀಕ್ಷಾ ಕೇಂದ್ರಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೋಗಿ.
ಈ ಬಾರಿ ಪರೀಕ್ಷೆ ಕೊಠಡಿಗೆ 15 ನಿಮಿಷಗಳ ಮೊದಲೇ ಪ್ರವೇಶಿಸಬಹುದು.
ಪ್ರವೇಶ ಪತ್ರದ ಜೊತೆಗೆ ಮಾನ್ಯತೆ ಇರುವ ಯಾವುದಾದರು ಐಡಿ ಕಾರ್ಡ್‌ ತೆಗೆದುಕೊಂಡು ಹೋಗಿ.
ಮೊಬೈಲ್ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗಬೇಡಿ.

ಇದನ್ನೂ ಓದಿ : Adi Jagadguru Panchacharya School: ಆದಿ ಜಗದ್ಗುರು ಪಂಚಾಚಾರ್ಯ ಪಾಠಶಾಲೆಗೆ ಕರ್ನಾಟಕ ಸಿಎಂ ಬೆಂಬಲ

SSLC EXAMS-Tight security: SSLC exam from March 31, tight security around exam centers, free travel for students

Comments are closed.