SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ : ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ

0

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿರುವುದರಿಂದ ಮುಂದೂಡಿಕೆ ಮಾಡಲಾಗಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ದಿನಾಂಕ ಕೊನೆಗೂ ಪ್ರಕಟವಾಗಿದೆ . ಜೂನ್​ 25ರಿಂದ ಪರೀಕ್ಷೆ ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಪರೀಕ್ಷಾ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಗತ್ಯಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಅಭ್ಯರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್​ ಒಳಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದ್ದು, ಕೈಗಳನ್ನು ಸ್ಯಾನಿಟೈಸರ್​ನಿಂದ ಶುದ್ಧಿಕರಿಸುವುದು ಹಾಗೂ ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಬೆಳಿಗ್ಗೆ 10.30ಕ್ಕೆ ಆರಂಭವಾಗಲಿದ್ದು, ಕೊರೊನಾ ತಪಾಸಣೆ ನಡೆಸುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 9.30ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಬೇಕೆಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಡ್ಡಾಯ ಮಾಡಿದೆ.

ಪರೀಕ್ಷಾ ವೇಳಾಪಟ್ಟಿ
ಜೂನ್ 25 – ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ – ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ
ಜೂನ್ 26- ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45
ಜೂನ್ 27- ಶನಿವಾರ – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜೂನ್ 29- ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
ಜುಲೈ- 1 ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ 2 – ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ- 3 ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
ಜುಲೈ 4- ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ.

Leave A Reply

Your email address will not be published.