SSLC Exams : ಜುಲೈ ಮೂರನೇ ವಾರ ಎಸ್ಎಸ್ಎಲ್‌ಸಿ ಪರೀಕ್ಷೆ : ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನೇ ಗುರಿಯಾಗಿರಿಸಿ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿಗಳು ‌ಕಡ್ಡಾಯ ಲಸಿಕೆ ಪಡೆದುಕೊಂಡಿರಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರತೀ ಪರೀಕ್ಷಾ ಕೇಂದ್ರದ ಕೊಠಡಿ, ಶೌಚಾಲಯ ಸೇರಿ ಕೇಂದ್ರದ ಆವರಣದಲ್ಲಿ ಪರೀಕ್ಷೆಗೆ ಮುನ್ನ ಹಾಗೂ ನಂತರ ಸ್ಯಾನಿಟೈಸ್ ಕಡ್ಡಾಯ ಮಾಡಲಾಗಿದೆ. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ ಯಂತೆ ಒಂದು ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಮತ್ತು ಪರೀಕ್ಷೆ ಕೊಠಡಿಗಳಲ್ಲಿ ಆರು ಅಡಿ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಲು  ಸೂಚಿಸಲಾಗಿದೆ.

ಇನ್ನು ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನೀರಿನ ಬಾಟಲಿ ತರಲು ಅವಕಾಶ. ವಿದ್ಯಾರ್ಥಿಗಳ ಬೇಡಿಕೆ ಇದ್ದರೆ ಆಹಾರದ ಡಬ್ಬಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಕೆಮ್ಮು, ನೆಗಡಿ,ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಗಳನ್ನು ವಿಶೇಷ ಕೊಠಡಿ ಅನ್ನೋ ಹೆಸರಿನಲ್ಲಿ ಕಾಯ್ದಿರಿಸ ಬೇಕು. ಪರೀಕ್ಷಾ ಕೇಂದ್ರ ಪ್ರವೇಶ ಮಾಡುತ್ತಿದ್ದಂತೆ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಗೆ ಕೌಂಟರ್ ನಿರ್ಮಿಸಬೇಕು

ವಿದ್ಯಾರ್ಥಿಗಳ ಪರೀಕ್ಷೆ ಸಲುವಾಗಿ ಥರ್ಮಲ್. ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ‌ ಚಿಕಿತ್ಸಾ ಪೆಟ್ಟಿಗೆ ಇಡುವುದು ಕಡ್ಡಾಯ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲಿ ಮಾಸ್ಕ್ ವಿತರಣೆ ಮಾಡಬೇಕು, ಹಾಗೂ ಹ್ಯಾಂಡ್​ ಸ್ಯಾನಿಟೈಸರನ್ನು ಪ್ರತಿ ವಿದ್ಯಾರ್ಥಿಗಳಿಗೆ ಮಾಡಬೇಕು. ಆರೋಗ್ಯ ಕೌಂಟರ್‌ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ.

Comments are closed.