ಸೋಮವಾರ, ಏಪ್ರಿಲ್ 28, 2025
HomeeducationSSLC Grace marks : ಫಲಿತಾಂಶಕ್ಕೂ ಮುನ್ನ ಸಿಹಿಸುದ್ದಿ ಕೊಟ್ಟ SSLC ಬೋರ್ಡ್: ಈ ವರ್ಷವೂ...

SSLC Grace marks : ಫಲಿತಾಂಶಕ್ಕೂ ಮುನ್ನ ಸಿಹಿಸುದ್ದಿ ಕೊಟ್ಟ SSLC ಬೋರ್ಡ್: ಈ ವರ್ಷವೂ ಸಿಗಲಿದೆ ಶೇಕಡಾ 10 ಗ್ರೇಸ್ ಅಂಕ

- Advertisement -

ಬೆಂಗಳೂರು : ಕೊರೋನಾದಿಂದ ಕಳೆದ ಎರಡು ವರ್ಷಗಳಿಂದ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲೆಡೆ ಶೈಕ್ಷಣಿಕ ಚಟುವಟಿಕೆಗಳ‌ ಮೇಲೆ ಕಾರ್ಮೋಡ ಕವಿದಿತ್ತು. ಹೀಗಾಗಿ ಮಕ್ಕಳು ಆನ್ ಲೈನ್ ಶಿಕ್ಷಣದಲ್ಲೇ ಪಾಠಕಲಿಯುವ ಸ್ಥಿತಿ ಇತ್ತು. ಅದರಲ್ಲೂ ವಿಶೇಷವಾಗಿ ಈ ಭಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ನೇರವಾಗಿ 8ನೇ ತರಗತಿಯಿಂದ ಎಸ್ ಎಸ್ ಎಲ್ ಸಿ ಗೆ ಬಂದಂತ ಸ್ಥಿತಿ. ಹೀಗೆ ಆತಂಕದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಸಿಹಿಸುದ್ದಿ (SSLC Grace marks ) ನೀಡಿದೆ.

ಹೌದು ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯ್ತಿರೋ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಕೆಲವೇ ಅಂಕಗಳಲ್ಲಿ ಫೇಲ್ ಆಗೋ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಮಾಡಲು ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಕೆಲವೇ ಅಂಕಗಳಲ್ಲಿ ಫೇಲಾಗುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಅನ್ವಯವಾಗಲಿದೆ. ಯಾವುದೇ ಮೂರು ವಿಷಯಗಳಿಗೆ ಈ ಗ್ರೇಸ್ ಅಂಕ ಅನ್ವಯವಾಗಲಿದೆ. ಈ ಮೊದಲು ಕೇವಲ ಶೇ 5 ರಷ್ಟು ಗ್ರೇಸ್ ಅಂಕ ನೀಡಲಾಗುತ್ತಿತ್ತು. ಈಗ ಮೂರು ವಿಷಯಗಳಿಗೆ ಶೇ.10ರಷ್ಟು ಗ್ರೇಸ್ ನೀಡಲು ನಿರ್ಧಾರ ಮಾಡಲಾಗಿದೆ.

ಈ ಮೊದಲು ಶೇ.5ರಷ್ಟು ಗ್ರೇಸ್ ಅಂಕ ನೀಡಲಾಗುತ್ತಿತ್ತು. ಕೋವಿಡ್ ಕಾರಣಕ್ಕೆ ಶೇ.10ಕ್ಕೆ ಏರಿಸಲಾಗಿತ್ತು. ಅದೇ ನಿಯಮವನ್ನು ಈ ವರುಷವೂ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಮೂರು ಥಿಯರಿ ಪರೀಕ್ಷೆ ಸೇರಿ 26 ಅಂಕ ಕೃಪಾಂಕ ನೀಡಲು ನಿರ್ಧಾರ ಆದರೆ ಮೂರು ವಿಷಯಗಳಲ್ಲಿ ಕೃಪಾಂಕ ನೀಡಿದರೂ ಪಾಸಾಗಲಿಲ್ಲವೆಂದರೆ ಅಂಥಹ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವುದಿಲ್ಲ ಎಂದಿದ್ದಾರೆ.

ಇನ್ನೇನು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ದಿನಗಣನೆ ನಡೆದಿದ್ದು, ಮೇ ಕೊನೆಯ ವಾರದೊಳಗಾಗಿ ಫಲಿತಾಂಶ ಘೋಷಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ. ಈ ಹಿಂದೆ ಮೇ ಮೊದಲ ವಾರದಲ್ಲೇ ಫಲಿತಾಂಶ ಪ್ರಕಟಿಸುವ ಸಿದ್ಧತೆ ನಡೆದಿತ್ತು. ಆದರೆ ಎಸ್ ಎಸ್ ಎಲ್ ಸಿ ಮೌಲ್ಯಮಾಪನದಿಂದ ನೂರಾರು ಶಿಕ್ಷಕರು ಹಿಂದೆ ಸರಿದಿದ್ದು, ಮೌಲ್ಯಮಾಪನಕ್ಕೆ ಹಾಜರಾಗಬೇಕಿದ್ದ ಶಿಕ್ಷಕರು ಗೈರಾಗಿದ್ದರು. ಹೀಗಾಗಿ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಪ್ರಕ್ರಿಯೆ ವಿಳಂಬಗೊಂಡಿತ್ತು.

ಇದನ್ನೂ ಓದಿ : Karnataka SSLC Result 2022 : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ : ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : ಬಿಸಿಲಿನ ತಾಪ ಹೆಚ್ಚಳ : ಶಾಲೆಗಳಿಗೆ ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಟ

SSLC Students Good news for Examination board will also get 10% grace point this year

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular