SSLC Marks Card : ಎಸ್‌ಎಸ್‌ಎಲ್‌ ಸಿ ಅಂಕಪಟ್ಟಿಯಲ್ಲಿ ಶಾಲೆಗಳ ಹೆಸರು ನಮೂದಿಸಿ : ಹೈಕೋರ್ಟ್‌ ಆದೇಶ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ (SSLC Marks Card) ವಿದ್ಯಾರ್ಥಿ ಹೆಸರು, ತಂದೆ ತಾಯಿಯ ಹೆಸರನ್ನು ನಮೂದಿಸಲಾಗುತ್ತಿದೆ. ಆದರೆ ಇನ್ಮುಂದೆ ಅಂಕಪಟ್ಟಿಯಲ್ಲಿ ಆಯಾಯ ಶಾಲೆಗಳ ಹೆಸರನ್ನು ನಮೂದಿಸಬೇಕು ಎಂದು ರಾಜ್ಯ ಸರಕಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾಯ ಶಾಲೆಗಳ ಹೆಸರು ನಮೂದಿಸಬೇಕು ಎಂದು ಬೆಂಗಳೂರಿನ ವಿವೇಕನಗರದ ಶಾಂತಿ ನಿಕೇತನ ಪ್ರೌಢಶಾಲೆ ಸೇರಿದಂತೆ ಎಂಟು ಶಾಲೆಗಳು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದವು. ಈ ಕುರಿತು ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಕೃಷ್ಣಭಟ್‌ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿಕಾರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾಯ ಶಾಲೆಗಳ ಹೆಸರು ನಮೂದಿಸಬೇಕು ಎಂದು ಹೈಕೋರ್ಟ್‌ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ ನಿರ್ದೇಶನವನ್ನು ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಈಗಾಗಲೇ ಮುಕ್ತಾಯವನ್ನು ಕಂಡಿದ್ದು, ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಸಂಕಷ್ಟದಿಂದಾಗಿ ಪರೀಕ್ಷೆಯನ್ನು ಸರಿಯಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಆದ್ರೆ ಈ ಬಾರಿ ಪರೀಕ್ಷೆಯ ಸುಸೂತ್ರವಾಗಿ ನಡೆಸಿರುವ ಇಲಾಖೆ ಶೀಘ್ರದಲ್ಲಿಯೇ ಫಲಿತಾಂಶವನ್ನು ನೀಡಲು ಸಜ್ಜಾಗಿದೆ.

ಇದನ್ನೂ ಓದಿ : ಪಾಕಿಸ್ತಾನದಲ್ಲಿ ಪಡೆದ ಶೈಕ್ಷಣಿಕ ಪದವಿ ಮಾನ್ಯವಲ್ಲ:ಯುಜಿಸಿ

ಇದನ್ನೂ ಓದಿ : ಸಿಬಿಎಸ್‌ಇ ಪರೀಕ್ಷೆಗೆ ಎರಡನೇ ದಿನ ಬಾಕಿ, ಹೆಚ್ಚಿನ ಅಂಕಗಳಿಸಲು ಹೀಗೆ ಇರಲಿ ನಿಮ್ಮ ತಯಾರಿ

SSLC Marks Card Should Mention The Names of Schools High Court Direction

Comments are closed.